ಭಾರತದ್ಲಲಿ 1110 ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ , ಸತ್ತವರ ಸಂಖ್ಯೆ 29ಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಮಾ.30-ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಆತಂಕಕಾರಿ ವೇಗದಲ್ಲಿ ಹಬ್ಬುತ್ತಿದ್ದು, ಸತ್ತವರ ಸಂಖ್ಯೆ 29ಕ್ಕೇರಿದೆ. ಕಳೆದ 24 ತಾಸುಗಳ ಅವಧಿಯಲ್ಲಿ ದೇಶದ ವಿವಿಧೆಡೆ 1110ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ನಿನ್ನೆ ಒಂದೇ ದಿನ 130ಕ್ಕೂ ಹೊಸ ಪ್ರಕರಣಗಳು ಪತ್ತೆಯಾಗಿರುವುದು ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ, ಪಶ್ಚಿಮ ಬಂಗಾಳ, ಪಂಬಾಜ್, ಬಿಹಾರ ಮತ್ತಿತರ ರಾಜ್ಯಗಳಲ್ಲಿ ಕೆಲವು ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ.

ಕೊರೊನಾ ಸೋಂಕಿನಿಂದ ಅತಿ ಹೆಚ್ಚು ಬಾಧಿತ ರಾಜ್ಯವೆಂದರೆ ಮಹಾರಾಷ್ಟ್ರ. ಅಲ್ಲಿ ಕಳೆದ 12 ತಾಸುಗಳ ಅವಧಿಯಲ್ಲಿ ಮತ್ತೆ 12 ಪ್ರಕರಣಗಳು ದೃಢಪಟ್ಟಿದ್ದು, ಪಾಸಿಟಿವ್ ಕೇಸ್‍ಗಳ ಸಂಖ್ಯೆ 215ಕ್ಕೇರಿದೆ.  ಮಧ್ಯಪ್ರದೇಶದಲ್ಲಿ ಮತ್ತೆ ಎಂಟು ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಬಾಧಿತರ ಸಂಖ್ಯೆ 47ಕ್ಕೇರಿದೆ.

ಪಂಜಾಬ್‍ನಲ್ಲಿಯೂ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಸೋಂಕು ಪೀಢಿತರ ಸಂಖ್ಯೆ 39ಕ್ಕೇರಿದೆಈ ಮಧ್ಯೆ ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಕೊರೊನಾ ಬಲಿ ತೆಗೆದುಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ ಸತ್ತವರ ಸಂಖ್ಯೆ ಎರಡಕ್ಕೇರಿದೆ. ದೇಶದಲ್ಲಿ ಈವರೆಗೆ ಸಮುದಾಯ ಸೋಂಕು ಪ್ರಕರಣಗಳು ವರದಿಯಾಗಿಲ್ಲವಾದರೂ, 3ನೇ ಹಂತದಲ್ಲಿ ಅದು ವ್ಯಾಪಿಸುವ ದೊಡ್ಡ ಮಟ್ಟದ ಆಘಾತ ಸಾಧ್ಯತೆ ಎದುರಾಗಿದೆ.

ಇಡೀ ದೇಶವೇ ಲಾಕ್‍ಡೌನ್ ಆಗಿದ್ದು, ಕಿಲ್ಲರ್ ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ವೈರಾಣು ಹಾವಳಿ ಮುಂದುವರಿದಿದೆ. ಹೆಮ್ಮಾರಿ ನಿಗ್ರಹಕ್ಕೆ ಕೇಂಧ್ರ ಮತ್ತು ರಾಜ್ಯ ಸರ್ಕಾರಗಳು ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಸೋಂಕು ವ್ಯಾಪಿಸುತ್ತಲೇ ಇರುವುದು ಆಘಾತಕಾರಿ ಬೆಳವಣಿಗೆಯಾಗಿದೆ..

ಮತ್ತೊಂದೆಡೆ ಮಹಾರಾಷ್ಟ್ರ, ಕೇರಳ, ಕರ್ನಾಟಕ, ತೆಲಂಗಾಣ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.  21 ದಿನಗಳ ಲಾಕ್‍ಔಟ್ ಆರನೇ ದಿನವಾದ ಇಂದು ದೇಶಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ.

ಗುಂಪು ಗುಂಪಾಗಿ ಗುಳೆ ಹೊರಟಿರುವ ವಲಸೆ ಕಾರ್ಮಿಕರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲ ರಾಜ್ಯ ಮತ್ತು ಜಿಲ್ಲಾ ಗಡಿಗಳನ್ನು ಬಂದ್ ಮಾಡುವಂತೆ ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟ ಸೂಚನೆ ನೀಡಿದೆ.

ಮುಂದಿನ ಎರಡು ವಾರ ಅತ್ಯಂತ ನಿರ್ಣಾಯಕ ಘಟ್ಟವಾಗಿದ್ದು, ಈ ಅವಧಿಯೊಳಗೆ ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ದಟ್ಟವಾಗಿದೆ.

Facebook Comments

Sri Raghav

Admin