ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ ಸೋಂಕಿತರ ಸಂಖ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ.7-ನಗರದಲ್ಲಿ ಕೊರೊನಾ ಸೋಂಕು ಕಡಿಮೆಯಾಗುವ ಯಾವ ಲಕ್ಷಣಗಳು ಗೋಚರಿಸುತ್ತಿಲ್ಲ. ಕಳೆದ ಒಂದು ತಿಂಗಳಿನಿಂದ ಪ್ರತಿನಿತ್ಯ 20 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ಕಾಣಿಸಿಕೊಳ್ಳುತ್ತಿರುವುದು ಮುಂದುವರೆಯುತ್ತಲೆ ಇದೆ. ಇಂದು ಕೂಡ ನಗರದಲ್ಲಿ 21413 ಸೋಂಕು ಪ್ರಕರಣಗಳು ಪತ್ತೆಯಗಿವೆ. ಸಂಜೆ ವೇಳೆಗೆ ಸೋಂಕಿತರ ಪ್ರಮಾಣ ಮತ್ತಷು ಹೆಚ್ಚಳಗೊಳ್ಳುವ ಸಾಧ್ಯತೆಗಳಿವೆ.

ಎಲ್ಲಾ ಸೌಕರ್ಯವಿರುವ ನಗರದಲ್ಲಿ ಸೋಂಕು ನಿಯಂತ್ರಣಕ್ಕೆ ಬಾರದಿರುವುದು ಎಚ್ಚರಿಕೆಯ ಗಂಟೆಯಾಗಿದೆ. ಸೋಂಕು ದಿನೇ ದಿನೇ ಹೆಚ್ಚುತ್ತಿರುವುದಕ್ಕೆ ಕಾರಣ ಯಾರು ಎನ್ನುವುದು ಮಾತ್ರ ನಿಗೂಢವಾಗಿದೆ.

ಸೋಂಕು ತಡೆಗಟ್ಟಲು ಸರ್ಕಾರ ಜನತಾ ಕಪ್ರ್ಯೂ ಜಾರಿ ಮಾಡಿದ್ದರೂ ಜನ ಕ್ಯಾರೆ ಎನ್ನದೆ ಮನಸ್ಸೋ ಇಚ್ಚೆಯಿಂದ ಓಡಾಡುತ್ತಿರುವುದು ಒಂದು ಕಡೆಯಾದರೆ, ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್ ಸಿಗದೆ ಪರದಾಡುತ್ತಿರುವುದು ಮತ್ತೊಂದು ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

ಒಬ್ಬ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡರೆ ಆತನೊಂದಿಗೆ ಸಂಪರ್ಕ ಹೊಂದಿರುವ ಸಾಧ್ಯತೆ ಇರುವ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲು ಎಡವುತ್ತಿರುವುದು ಮಗದೊಂದು ಕಾರಣ ಎಂಬ ಆರೋಪಗಳು ಕೇಳಿ ಬರುತ್ತಿವೆ. ಎಲ್ಲಾ ವ್ಯವಸ್ಥೆ ಇರುವ ನಗರದಲ್ಲೇ ಇಂತಹ ಸ್ಥಿತಿ ಇದೆ ಎಂದರೆ ಇನ್ನು ಗ್ರಾಮೀಣ ಪ್ರದೇಶಗಳ ಸ್ಥಿತಿಯನ್ನು ಆ ದೇವರೆ ಕಾಪಾಡಬೇಕು.

ಕೆಲ ದಿನಗಳ ಹಿಂದೆ ಹಳ್ಳಿಗಳಲ್ಲಿ ಸೋಂಕು ಪ್ರಮಾಣ ಹೆಚ್ಚಿರಲಿಲ್ಲ. ಆದರೆ, ನಗರದಿಂದ ಕೆಲ ಸೋಂಕಿತರು ತಮ್ಮ ಊರುಗಳಿಗೆ ತೆರಳಿರುವುದರಿಂದ ಅವರಿಂದ ಹಳ್ಳಿ ಹಳ್ಳಿಗಳಲ್ಲೂ ಸೋಂಕು ಹರಡಲು ಕಾರಣವಾಗಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಇನ್ನಷ್ಟು ಅನಾಹುತ ಸಂಭವಿಸುವ ಸಾಧ್ಯತೆಗಳಿವೆ.

Facebook Comments

Sri Raghav

Admin