ದೇಶದಾದ್ಯಂತ ಮತ್ತೆ ಹೆಚ್ಚಿದ ಕೊರೊನಾತಂಕ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮಾ.7- ಮಾರಣಾಂತಿಕ ಕೊರೊನಾ ಸೋಂಕು ಕ್ಷೀಣಿಸುತ್ತಿದ್ದ ಬೆನ್ನಲ್ಲೇ ಮತ್ತೆ ದೇಶದಲ್ಲಿ ಕೊರೊನಾ ಆತಂಕ ಶುರುವಾಗಿದೆ. ಸತತ ಎರಡನೆ ದಿನವೂ 18,000 ಸೋಂಕು ಪ್ರಕರಣಗಳು ಪತ್ತೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. 18,000 ಹೊಸ ಪ್ರಕರಣಗಳಿಂದಾಗಿ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,10,799ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಂಕಿ ಅಂಶಗಳು ದೃಢಪಡಿಸಿವೆ.

ಸತತ ಐದು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು , ಸಕ್ರಿಯ ಸೋಂಕಿತರ ಸಂಖ್ಯೆ 1,83,523ಕ್ಕೆ ಹೆಚ್ಚಳವಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಶೇ.96.95ಕ್ಕೆ ಹೆಚ್ಚಿದೆ.

ಪ್ರತಿ ನಿತ್ಯ 18,000ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಕಂಡು ಬರುತ್ತಿದ್ದು , ದಿನ ನಿತ್ಯ ಸೋಂಕಿಗೆ 100 ಮಂದಿ ಬಲಿಯಾಗುತ್ತಿರುವುದರಿಂದ ಸತ್ತವರ ಸಂಖ್ಯೆ 1.57,756ಕ್ಕೆ ಹೆಚ್ಚಳಗೊಂಡಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಸೋಂಕು ಹೆಚ್ಚಳಗೊಳ್ಳುತ್ತಿದ್ದರೂ ದೇಶದಲ್ಲಿ ಪ್ರತಿ ನಿತ್ಯ ಸಾವಿರಾರು ಮಂದಿಯ ತಪಾಸಣೆ ನಡೆಸಲಾಗುತ್ತಿದೆ. ನಿನ್ನೆ ಒಂದೇ ದಿನ 7,37,830 ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಇದುವರೆಗೂ 22,14,30,507 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ.

ಹೆಚ್ಚುತ್ತಿರುವ ಕೊರೊನಾ ಸೋಂಕು ಕಡಿಮೆಗೊಳಿಸುವತ್ತ ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು ಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.

Facebook Comments

Sri Raghav

Admin