ಭಾರತದಲ್ಲಿ 2ನೇ ಕೊರೋನಾ ಅಲೆ ಫಿಕ್ಸ್, 24 ಗಂಟೆಯಲ್ಲಿ 35,871 ಮಂದಿಗೆ ಪಾಸಿಟಿವ್..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಮಾ.18-ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟಿಸುವ ಎಲ್ಲಾ ಸಾಧ್ಯತೆಗಳು ಕಾಣಿಸಿಕೊಳ್ಳತೊಡಗಿದೆ. ಕಳೆದ ಹಲವಾರು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೆ ಇದ್ದು, ಇಂದು ಬರೋಬರಿ 35,871 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಕಳೆದ 102 ದಿನಗಳಲ್ಲಿ ಅತ್ಯಧಿಕ ಸೋಂಕು ಪ್ರಕರಣ ಕಳೆದ 24 ಗಂಟೆಗಳಲ್ಲಿ ವರದಿಯಾಗಿರುವುದರಿಂದ ಸಾರ್ವಜನಿಕರು ಎಚ್ಚರವಹಿಸಬೇಕಾದ ಅವಶ್ಯಕತೆ ಇದೆ.

35,871 ಸೋಂಕು ಪ್ರಕರಣ ದಾಖಲಾಗುವ ಮೂಲಕ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 1,14,74,605ಕ್ಕೆ ಏರಿಕೆಯಾಗಿದೆ. ಕಳೆದ ಎಂಟು ದಿನಗಳಿಂದ ಕೊರೊನಾ ಸೋಂಕಿನ ಪ್ರಮಾಣ ಏರುಮುಖದತ್ತ ಸಾಗಿರುವುದರಿಂದ ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ ಎರಡೂವರೆ ಕೋಟಿ ಗಡಿ ದಾಟಿದೆ.

( ಉಡುಪಿ ಮಣಿಪಾಲ್ ಸಂಸ್ಥೆಯ 27 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್..! )

ಸೋಂಕು ಪ್ರಮಾಣ ಶೇ.2.20ರಷ್ಟು ಹೆಚ್ಚಿರುವುದರಿಂದ ಚೇತರಿಕೆ ಪ್ರಮಾಣ ಶೇ.96,41ಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳಲ್ಲಿ ಉಲ್ಲೇಖವಾಗಿದೆ. ಕಳೆದ 24 ಗಂಟೆಗಳಲ್ಲಿ ಸೋಂಕಿಗೆ 172 ಮಂದಿ ಬಲಿಯಾಗುವ ಮೂಲಕ ಮಹಾಮಾರಿಗೆ ಬಲಿಯಾದವರ ಸಂಖ್ಯೆ 1,59,216ರಷ್ಟು ಹೆಚ್ಚಳವಾಗಿದೆ.

Facebook Comments