ದೇಶದಲ್ಲಿ ಕ್ಷೀಣಿಸುತ್ತಿದ ಸಕ್ರಿಯ ಕೊರೊನಾ ಸೋಂಕಿನ ಪ್ರಮಾಣ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಅ.28-ದೇಶದಲ್ಲಿ ಸಕ್ರಿಯ ಕೊರೊನಾ ಸೋಂಕಿನ ಪ್ರಮಾಣ ದಿನೇ ದಿನೇ ಕ್ಷೀಣಿಸುತ್ತಿದೆ. ಕಳೆದ 243 ದಿನಗಳಲ್ಲಿ ಇದೇ ಮೊದಲ ಭಾರಿಗೆ ಸಕ್ರಿಯ ಸೋಂಕಿನ ಪ್ರಮಾಣ 1.60 ಲಕ್ಷಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನಿನ್ನೆಯಿಂದ 16156 ಮಂದಿಗೆ ಕೊರೊನಾ ಸೋಂಕು ತಗುಲಿರುವುದರಿಂದ ದೇಶದ ಒಟ್ಟು ಸೋಂಕಿತರ ಸಂಖ್ಯೆ 3.42 ಕೋಟಿ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 733 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರಿಂದ ಇದುವರೆಗೂ ಕೊರೊನಾ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 4,56,386 ಲಕ್ಷಕ್ಕೆ ಏರಿಕೆಯಾಗಿದೆ.

ಕಳೆದ 34 ದಿನಗಳಿಂದ ದೇಶದಲ್ಲಿ ಪ್ರತಿನಿತ್ಯ 30 ಸಾವಿರದೊಳಗೆ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿರುವುದು ವಿಶೇಷ. ದಿನೇ ದಿನೇ ಸಕ್ರಿಯ ಸೋಂಕಿನ ಪ್ರಕರಣಗಳು ಕುಸಿಯುತ್ತಿರುವುದರಿಂದ ರಾಷ್ಟ್ರೀಯ ಕೊರೊನಾ ಚೇತರಿಕೆ ಪ್ರಮಾಣ ಶೇ.98.20ಕ್ಕೆ ಏರಿಕೆಯಾಗಿದೆ.

Facebook Comments