ನೇಣು ಬಿಗಿದುಕೊಂಡು ಕೊರೊನಾ ಸೋಂಕಿತ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಬಳ್ಳಾಪುರ, ಆ.2- ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಚಿಂತಾಮಣಿ ತಾಲ್ಲೂಕಿನ ಸೀತಾರಾಮಪುರ ಗ್ರಾಮದ ಆಂಜನಪ್ಪ (59) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕಳೆದ ಐದು ದಿನಗಳ ಹಿಂದೆ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.

ನಂತರ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತಪಾಸಣೆ ಮಾಡಿದ ಸಂದರ್ಭದಲ್ಲಿ ಆತನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.

ಇದಾದನಂತರ ಆತನನ್ನು ಚಿಕ್ಕಬಳ್ಳಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಈ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಪಾಳಿ ಬದಲಾದ ಸಂದರ್ಭವನ್ನು ಬಳಸಿಕೊಂಡ ಆಂಜನಪ್ಪ ಆಸ್ಪತ್ರೆಯಿಂದ ಪರಾರಿಯಾಗಿದ್ದ.

ಚಿಕ್ಕಬಳ್ಳಾಪುರ ಸಮೀಪ ಗುಂತೆಪ್ಪನಹಳ್ಳಿ ಗ್ರಾಮದ ಬಳಿ ಮರಕ್ಕೆ ಈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ನಿವಾಸವನ್ನು ಸೀಲ್‍ಡೌನ್ ಮಾಡಲಾಗಿದೆ ಎಂದು ಪ್ರಭಾರಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರಮೇಶ್ ತಿಳಿಸಿದ್ದಾರೆ.

Facebook Comments

Sri Raghav

Admin