ದೇಶದಾದ್ಯಂತ ದಿಢೀರನೆ ಏರಿಕೆಯಾದ ಕೊರೋನಾ ಸೋಂಕಿತರ ಸಂಖ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಫೆ.28- ದಿಢೀರನೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯ ಹಂತ ತಲುಪಿದೆ. ಇದರಿಂದ ಆರೋಗ್ಯ ಇಲಾಖೆ ಹಾಗೂ ಸರ್ಕಾರಕ್ಕೆ ಹೊಸ ಚಿಂತೆ ಆವರಿಸಿದೆ. ನಾಳೆಯಿಂದ ಸಾರ್ವಜನಿಕ ವಲಯದಲ್ಲಿ ಕೋವಿಡ್ ಲಸಿಕೆ ಹಂಚಿಕೆ ಆದೇಶ ಹೊರಬಿದ್ದಿರುವ ನಡುವೆಯೇ ದೇಶದಲ್ಲಿ ಕಳೆದ 24 ಗಂಟೆ ಅವಯಲ್ಲಿ 16,752ಕ್ಕೂ ಹೆಚ್ಚು ಮಂದಿಗೆ ಕೊರೊನಾ ಆವರಿಸಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.

ಕಳೆದ 30 ದಿನಗಳಲ್ಲಿ ನಿನ್ನೆ ಒಂದೇ ದಿನ ಅತಿ ಹೆಚ್ಚು ಸೋಂಕಿತರು ಕಂಡುಬಂದಿದ್ದಾರೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.  ಇದರ ನಡುವೆ ಹಲವೆಡೆ ಕೋವಿಡ್‍ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಕೂಡ ಹೆಚ್ಚಿದ್ದು, ಸಕ್ರಿಯ ಪ್ರಕರಣಗಳು ತಗ್ಗಿರುವುದು ಸ್ವಲ್ಪ ಸಮಾಧಾನ ತಂದಿದೆ.

ಈಗ ಒಟ್ಟು 1,01,75,169 ಮಂದಿಗೆ ಕೊರೊನಾ ಬಾಸಿದ್ದು, ಇದರಲ್ಲಿ ಗುಣಮುಖರಾದವರ ಸಂಖ್ಯೆ ಶೇ.97.10ಕ್ಕೆ ಮುಟ್ಟಿದೆ ಎಂದು ತಿಳಿಸಲಾಗಿದೆ. ಪದೇ ಪದೇ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಸಾರ್ವಜನಿಕರು ಅಂತರ ಕಾಪಾಡಿಕೊಂಡು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದರೂ ಹಲವು ಮಹಾನಗರಗಳಲ್ಲಿ ಜನರು ಇದನ್ನು ನಿರ್ಲಕ್ಷಿಸಿದ್ದಾರೆ. ಇದರಿಂದ ಸೋಂಕು ಹರಡುವುದು ಹೆಚ್ಚುತ್ತಿದೆ ಎಂದು ವೈದ್ಯರು ಹೇಳುತ್ತಿದ್ದಾರೆ.

Facebook Comments

Sri Raghav

Admin