ಹುಬ್ಬಳ್ಳಿ : ಕೊರೊನಾ ಸೋಂಕಿತ ಆರೋಪಿಗಳು ಹೆಗ್ಗೆರಿಯ ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್
ಹುಬ್ಬಳ್ಳಿ, ಜು.17- ವಾಣಿಜ್ಯ ನಗರಿಯ ಪೊಲೀಸರಿಗೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳು ತಲೆನೋವಾಗಿ ಪರಿಣಮಿಸಿದ್ದಾರೆ. ಕಳ್ಳತನ, ಕೊಲೆ, ವಂಚನೆ ಪ್ರಕರಣದಂತಹ ಆರೋಪದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ಆರೋಪಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಇವರಿಂದ ಪೊಲೀಸ್ ಸಿಬ್ಬಂದಿಗೂ ಕೊರೊನಾ ಸೋಂಕು ತಗುಲಿದ್ದು, ಕೊರೊನಾ ಸೋಂಕಿತ ಎಲ್ಲಾ ಆರೋಪಿಗಳನ್ನು ನಗರದ ಹೆಗ್ಗೆರಿಯ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರಿಸಲು ಹುಬ್ಬಳ್ಳಿ – ಧಾರವಾಡ ಪೊಲೀಸರು ನಿರ್ಧರಿಸಿದ್ದಾರೆ.
ಹುಬ್ಬಳ್ಳಿಯ ಕಿಮ್ಸï ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಕೊರೊನಾ ಸೋಂಕಿತ ಆರೋಪಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದರಿಂದ ಪೊಲೀಸರು ಈ ನಿರ್ಧಾರಕ್ಕೆ ಬಂದಿದ್ದಾರೆ.
ಕಳ್ಳತನದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ 55 ವರ್ಷದ ಆರೋಪಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಆರೋಪಿಯನ್ನು ಕಿಮ್ಸï ಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು 12 ಗಂಟೆಯಲ್ಲಿ ಗದಗದಲ್ಲಿ ಬಂಧಿಸಿ ಕರೆ ತಂದಿದ್ದಾರೆ.
ಇದುವರೆಗೆ ಬಂಧಿತ ಮೂವರು ಆರೋಪಿಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಮೂವರನ್ನು ಕೋವಿಡ್ ಕೇರ್ ಸೆಂಟರ್ಗೆ ಶಿ¥s್ಟï ಮಾಡಿದ್ದಾರೆ.
ಸುರಕ್ಷತಾ ಕಾರಣಗಳಿಗಾಗಿ ಸೋಂಕಿತ ಆರೋಪಿಗಳನ್ನು ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರಿಸಲಾಗಿದ್ದು, ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದ್ದಾರೆ.