ಕೊರೋನಾ ಪರೀಕ್ಷೆಯಲ್ಲಿ ಸಿಎಂಗೆ ನೆಗೆಟಿವ್, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.10- ಕೊರೋನಾ ವೈರಸ್ ಸೋಂಕಿನಿಂದ ಬಹುತೇಕ ಗುಣಮುಖರಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನೆಗೆಟಿವ್ ಬಂದಿರುವ ಹಿನ್ನೆಲೆಯಲ್ಲಿ ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ಇಂದು ಮತ್ತೊಮ್ಮೆ ಯಡಿಯೂರಪ್ಪ ಅವರ ಸ್ವ್ಯಾಬ್ ಸಂಗ್ರಹ ಮಾಡಲಾಗಿದ್ದು, ವೈದ್ಯಕೀಯ ಪರೀಕ್ಷೆ ನೆಗೆಟಿವ್ ಬಂದಿದ್ದೇ ಆದರೆ, ಶೀಘ್ರವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಅಕಾರಿಗಳು ಮಾಹಿತಿ ನೀಡಿದ್ದಾರೆ.

ಕೊರೋನಾ ಸೋಂಕಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹತ್ತು ದಿನಗಳ ಹಿಂದಷ್ಟೇ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.ಇದೀಗ ಅವರ ಆರೋಗ್ಯದಲ್ಲಿ ಬಹುತೇಕ ಚೇತರಿಕೆ ಕಂಡುಬಂದಿದ್ದು, ಇಂದು ಕೋವಿಡ್-19 ನೆಗೆಟಿವ್ ಬಂದಿರುವ ಹಿನ್ನಲೆಯಲ್ಲಿ ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆ.2ರಂದು ಆಸ್ಪತ್ರೆಗೆ ದಾಖಲಾಗಿದ್ದ ಯಡಿಯೂರಪ್ಪ ಅವರಿಗೆ ಭಾನುವಾರ ಸೋಂಕು ಪರೀಕ್ಷೆ ನಡೆಸಲಾಗಿತ್ತು. ಇಂದು ವರದಿ ಬಂದಿದ್ದು, ಅವರಿಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಎಂದು ಆಸ್ಪತ್ರೆ ವೈದ್ಯರು ಖಚಿತಪಡಿಸಿದ್ದಾರೆ.

ಆದರೂ ಸಂಜೆಯೊಳಗೆ ಮತ್ತೊಮ್ಮೆ ಪರೀಕ್ಷೆ ನಡೆಸಲಾಗುತ್ತದೆ. ನೆಗೆಟಿವ್ ಬಂದಿದ್ದೇ ಆದರೆ ಮತ್ತೊಂದು ಸುತ್ತಿನ ಆರೋಗ್ಯ ಪರೀಕ್ಷೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಪ್ರಸ್ತುತ ಯಡಿಯೂರಪ್ಪ ಅವರು ಲಕ್ಷಣ ರಹಿತ ಸೋಂಕು ಪೀಡಿತರಾಗಿದ್ದು, ಕರ್ನಾಟಕದಲ್ಲಿ ಪ್ರಸ್ತುತ ಚಾಲನೆಯಲ್ಲಿರುವ ಮಾರ್ಗಸೂಚಿಗಳ ಪ್ರಕಾರ ಆಮ್ಲಜನಕ ಶುದ್ಧತ್ವದ ಪ್ರಮಾಣ ಶೇ.95ಕ್ಕಿಂತಲೂ ಹೆಚ್ಚಿದ್ದರೆ, ಉಸಿರಾಟದ ಪ್ರಮಾಣ ನಿಮಿಷಕ್ಕೆ ಶೇ.24ರಷ್ಟಿದ್ದರೆ, ಪರೀಕ್ಷೆ ಮಾಡದೆಯೇ ಬಿಡುಗಡೆ ಮಾಡಬಹುದು ಎಂದು ತಿಳಿಸಿದೆ.

ಸ್ವ್ಯಾಬ್ ಸಂಗ್ರಹದ 10 ದಿನಗಳ ಬಳಿಕ ವೈದ್ಯಕೀಯ ಪರೀಕ್ಷೆ ನೆಗೆಟಿವ್ ಗಾಗಿ ಕಾಯದೆ ಲಕ್ಷಣ ರಹಿತ ರೋಗಿಗಳನ್ನು ಬಿಡುಗಡೆ ಮಾಡಬಹುದಾಗಿದೆ. ಈಗಾಗಲೇ ಯಡಿಯೂರಪ್ಪ ಅವರು ಆಸ್ಪತ್ರೆಯಲ್ಲಿ 8 ದಿನಗಳ ಕಾಲ ಕಳೆದಿದ್ದಾರೆ.

ಆದರೆ, ಯಡಿಯೂರಪ್ಪ ಅವರ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ಪರೀಕ್ಷೆಯ ದೃಢೀಕರಣಕ್ಕಾಗಿ ಕಾಯಬೇಕಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.

Facebook Comments

Sri Raghav

Admin