ಅಮೆರಿಕದಲ್ಲಿ 10 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ನ್ಯೂಯಾರ್ಕ್/ವಾಷಿಂಗ್ಟನ್, ಏ.27- ವಿಶ್ವದಲ್ಲೇ ಕೋವಿಡ್-19 ವೈರಾಣು ದಾಳಿಗೆ ಅತಿಹೆಚ್ಚು ರೋಗಿಗಳು ಬಲಿಯಾದ ಮತ್ತು ಸೋಂಕು ಬಾಧಿತ ದೇಶ ಎಂಬ ಕುಖ್ಯಾತಿಗೆ ಅಮೆರಿಕ ಪಾತ್ರವಾಗಿದೆ.

ಸೂಪರ್‍ಪವರ್ ದೇಶದಲ್ಲಿ ಮೃತರ ಸಂಖ್ಯೆ 55,000ಕ್ಕೇರಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 10 ಲಕ್ಷ ದಾಟಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ಸೋಂಕಿತರಲ್ಲಿ ಕೆಲವರ ಸ್ಥಿತಿ ಶೋಚನೀಯವಾಗಿದ್ದು, ಮುಂದಿನ 24 ತಾಸುಗಳಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ನಿನ್ನೆ ಮತ್ತೆ ಅಮೆರಿಕದ ವಿವಿಧ ರಾಜ್ಯಗಳು ಮತ್ತು ಪ್ರಮುಖ ನಗರಗಳಲ್ಲಿ ಕೊರೊನಾ ಸಾವು ಮತ್ತು ಸೋಂಕು ಪ್ರಕರಣಗಳ ಸರಣಿ ಯಥಾಪ್ರಕಾರ ಮುಂದುವರಿದಿದೆ. ಸ್ವಲ್ಪ ಸಮಾಧಾನಕರ ಸಂಗತಿ ಎಂದರೆ ಅಮೆರಿಕದಲ್ಲಿ ಸುಮಾರು 90,000 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕಿಲ್ಲರ್ ವೈರಸ್ ಕೇಂದ್ರ ಬಿಂದು ಎನಿಸಿರುವ ನ್ಯೂಯಾರ್ಕ್ ನಗರವೊಂದರಲ್ಲೇ ಈವರೆಗೆ ಸುಮಾರು 21,000ಕ್ಕೂ ಹೆಚ್ಚು ಮಂದಿಯನ್ನು ಕೊರೊನಾ ವೈರಸ್ ಬಲಿಪಡೆದಿದೆ. ಇಲ್ಲಿ ಸೋಂಕಿತರ ಸಂಖ್ಯೆ 3.50 ಲಕ್ಷ ದಾಟಿದೆ.

ಅಮೆರಿಕದ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ 70ಕ್ಕೂ ಹೆಚ್ಚು ಭಾರತೀಯರನ್ನು ಕೊರೊನಾ ಬಲಿ ಪಡೆದಿದೆ ಎಂದು ಆರೋಗ್ಯ ಇಲಾಖೆಯ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

Facebook Comments

Sri Raghav

Admin