ಭಾರತದಲ್ಲಿ ಕೊರೊನಾ ಸ್ಫೋಟ, ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಪ್ರಧಾನಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಏ.4-ಕೊರೊನಾ ಸೋಂಕು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ರಜಾ ದಿನವಾದ ಭಾನುವಾರ ಕೂಡ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಪ್ರಗತಿಪರಿಶೀಲನೆ ನಡೆಸಿದರು.

ಸಂಪುಟ ಕಾರ್ಯದರ್ಶಿ, ಪ್ರಧಾನಿ ಕಾರ್ಯಾಲಯದ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ಕಾರ್ಯದರ್ಶಿ ಹಾಗೂ ನೀತಿ ಆಯೋಗದ ಸದಸ್ಯ ವಿನೋದ್ ಪೌಲ್ ಸೇರಿದಂತೆ ಅನೇಕ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

ನಿನ್ನೆ ದೇಶದಲ್ಲಿ 93 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಇದು ಅತ್ಯಂತ ಆತಂಕಕಾರಿಯಾಗಿದ್ದು, ಪ್ರಧಾನಿಯವರು ಇಂದು ತುರ್ತು ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಕೊರೊನಾ ಸೋಂಕು ನಿಯಂತ್ರಣಕ್ಕೆ ನಡೆಯುತ್ತಿರುವ ಲಸಿಕಾ ಆಂದೋಲನ ಕುರಿತು ಪ್ರಧಾನಿಯವರು ಇದೇ ಸಂದರ್ಭದಲ್ಲಿ ಪ್ರಗತಿ ಪರಿಶೀಲಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Facebook Comments

Sri Raghav

Admin