ಮೂವರು ಪೊಲೀಸರಿಗೆ ಕೊರೊನಾ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.8- ಚಂದ್ರಾ ಲೇಔಟ್ ಪೊಲೀಸ್ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸೋಂಕು ತಗುಲಿರುವ ಮೂವರು ಸಿಬ್ಬಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಈ ಠಾಣೆಯಲ್ಲಿನ 53 ಪೊಲೀಸ್ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಮೂವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Facebook Comments