ಬೆಂಗಳೂರಲ್ಲಿ ಟ್ರಾಫಿಕ್ ಪೊಲೀಸರನ್ನೂ ಬಿಡದ ಕೊರೋನಾ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 22- ನಗರ ಸಂಚಾರಿ ಕಾನ್ಸ್‍ಟೇಬಲ್‍ವೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಫ್ರೇಜರ್‍ಟೌನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಯಲಹಂಕ ಸಮೀಪದ ನಿವಾಸಿಯಾಗಿರುವ ಕಾನ್ಸ್‍ಟೇಬಲ್‍ಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾನ್ಸ್‍ಟೇಬಲ್‍ಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಫ್ರೇಜರ್‍ಟೌನ್ ಪೊಲೀಸ್ ಠಾಣೆಯನ್ನು ಸ್ಥಳಾಂತರ ಮಾಡಲಾಗಿದ್ದು, ಇಡೀ ಕಟ್ಟಡಕ್ಕೆ ಸೋಂಕು ನಿವಾರಕ ರಾಸಾಯನಿಕ ಸಿಂಪಡಿಸಲಾಗುತ್ತಿದೆ.

ಕಾನ್ಸ್‍ಟೇಬಲ್‍ನೊಂದಿಗೆ ಸಂಪರ್ಕವಿರಿಸಿಕೊಂಡಿದ್ದವರನ್ನು ಪತ್ತೆ ಹಚ್ಚಿ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗುವುದು ಹಾಗು ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚಿಸುವಂತೆ ನಡೆದುಕೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಸ್‍ಟೇಬಲ್‍ಗೆ ಸೋಂಕು ತಗುಲಿರುವ ನಿಖರ ಕಾರಣ ತಿಳಿದುಬಂದಿಲ್ಲ. ಆತ ಯಾರೊಂದಿಗೆ ಸಂಪರ್ಕವಿರಿಸಿಕೊಂಡಿದ್ದ ಆತನಿಗೆ ಸೋಂಕು ತಗುಲಿದ್ದು ಹೇಗೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.

Facebook Comments

Sri Raghav

Admin