ಕೊರೊನಾ ಸ್ಥಿತಿಗತಿ ಕುರಿತಂತೆ ರಾಜ್ಯಪಾಲರಿಗೆ ಮಾಹಿತಿ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.18- ರಾಜ್ಯದಲ್ಲಿ ಉಂಟಾಗಿರುವ ಕೊರೊನಾ ಸ್ಥಿತಿಗತಿ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದರು. ನಿನ್ನೆಯಷ್ಟೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಅವರು ರಾಜ್ಯಪಾಲರನ್ನು ಭೇಟಿಯಾದ ಬೆನ್ನಲ್ಲೇ ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಭೇಟಿಯಾಗಿರುವುದು ಮಹತ್ವ ಪಡೆದುಕೊಂಡಿದೆ.

ಬೆಳಗ್ಗೆ 12.30ಕ್ಕೆ ರಾಜಭವನಕ್ಕೆ ಆಗಮಿಸಿದ ರವಿಕುಮಾರ್ ಅವರು ರಾಜ್ಯಪಾಲರಿಗೆ ಕೋವಿಡ್ ನಿಯಂತ್ರಣ ಸಂಬಂಸಿದಂತೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತಾಗಿ ಪ್ರತಿಯೊಂದು ಮಾಹಿತಿಯನ್ನು ಒದಗಿಸಿದರು.

ಸರ್ಕಾರಿ, ಖಾಸಗಿ ಆಸ್ಪತ್ರೆಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳು, ಖಾಸಗಿ ವೈದ್ಯಕೀಯ ಕಾಲೇಜುಗಳು, ಕೋವಿಡ್ ಕೇಂದ್ರಗಳಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆ ಐಸಿಯುನಲ್ಲಿ ದಾಖಲಾಗಿರುವುದು, ಲಭ್ಯವಿರುವ ಹಾಸಿಗೆ, ಲಸಿಕೆ, ವೆಂಟಿಲೇಟರ್, ಆಕ್ಸಿಜನ್, ಆ್ಯಂಬುಲೆನ್ಸ್ ಸೇರಿದಂತೆ ಮತ್ತಿತರ ವಿವರಗಳ ಮಾಹಿತಿಯನ್ನು ನೀಡಿದ್ದಾರೆ.

ಮೇ ತಿಂಗಳ ಮಧ್ಯಭಾಗದಲ್ಲಿ ಹೆಚ್ಚಿನ ಸೋಂಕು ಬರಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಏಪ್ರಿಲ್ ತಿಂಗಳ ಮೊದಲ ವಾರದಿಂದಲೇ ನಮ್ಮ ನಿರೀಕ್ಷೆಗೂಮೀರಿದ ಸೋಂಕಿನ ಪ್ರಕರಣಗಳು ದಾಖಲಾಗುತ್ತಿವೆ. ಆದರೂ ಸರ್ಕಾರ ಸೋಂಕು ಹರಡುವುದನ್ನು ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಕೊರೊನಾ ಕಫ್ರ್ಯೂ ವಿಸಲಾಗಿದೆ. ನಾಲ್ಕೈದು ಜಿಲ್ಲೆಗಳಲ್ಲಿ ಪರಿಸ್ಥಿತಿ ವಿಷಮವಾಗಿದ್ದನ್ನು ಹೊರತುಪಡಿಸಿದರೆ ಬಹುತೇಕ ಕಡೆ ಸಹಜ ಸ್ಥಿತಿಯಲ್ಲಿದೆ.ಪ್ರತಿಯೊಬ್ಬರಿಗೂ ಉತ್ತಮವಾದ ಆರೋಗ್ಯ ಸೇವೆಯನ್ನು ಒದಗಿಸಲು ಸರ್ಕಾರ ಶಕ್ತಿ ಮೀರಿ ದುಡಿಯುತ್ತಿದೆ. ಏಕಾಏಕಿ ಸೋಂಕಿನ ಪ್ರಕರಣಗಳು ಹೆಚ್ಚಾಗಿದ್ದರಿಂದ ಕೆಲವು ಕಡೆ ಹಾಸಿಗೆಗಳ ಕೊರತೆ ಎದುರಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡಬೇಕೆಂದು ಸರ್ಕಾರ ಸೂಚನೆ ಕೊಟ್ಟಿದೆ. ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದ್ದು, ರಾಜ್ಯಕ್ಕೆ ಎದುರಾಗಿರುವ ಆಕ್ಸಿಜನ್ ಪೂರೈಕೆ, ಕೋವಿಡ್ ಲಸಿಕೆ ಪೂರೈಸಲು ಮನವಿ ಮಾಡಿದ್ದೇವೆ. ನಮ್ಮ ಬೇಡಿಕೆಗೆ ತಕ್ಕಂತೆ ಕೇಂದ್ರದಿಂದಲೂ ಪೂರೈಕೆಯಾಗುತ್ತದೆ.

ಕೊರೊನಾ ತಡೆಗಟ್ಟಲು ಸರ್ಕಾರ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಮುಖ್ಯ ಕಾರ್ಯದರ್ಶಿಗಳು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಇನ್ನಷ್ಟು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ರಾಜ್ಯಪಾಲರು ಪಿ.ರವಿಕುಮಾರ್ ಅವರಿಗೆ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

Facebook Comments

Sri Raghav

Admin