ಕೊರೋನಾ ಆರ್ಭಟ : ಬೆಂಗಳೂರಿಗರಲ್ಲಿ ಸಚಿವ ಆರ್.ಅಶೋಕ್ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.20- ಬೆಂಗಳೂರಿನ ಹಲವೆಡೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಅನಗತ್ಯ ಓಡಾಟಗಳನ್ನು ನಿಲ್ಲಿಸಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕರು ಅನಗತ್ಯ ಓಡಾಟ ನಿಲ್ಲಿಸುವ ಅಗತ್ಯವಿದೆ ಎಂದಿದ್ದಾರೆ.

ಅಗತ್ಯ ಕಾರ್ಯಗಳಿಗೆ ಹೊರ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಓಡಾಡತಕ್ಕದ್ದು. ಸಾಮಾಜಿಕ ಅಂತರ ಕಾಯ್ದುಕೊಂಡೇ ತಮ್ಮ ವ್ಯಾಪಾರ-ವಹಿವಾಟು ಹಾಗೂ ಇತರೆ ಕೆಲಸಗಳನ್ನು ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹಾಗೂ ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಲಾಕ್‍ಡೌನ್ ತೆರವಾದ ಮೇಲೆ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೊರರಾಜ್ಯದಿಂದ ಬಂದವರಿಂದ ಸೋಂಕು ಹೆಚ್ಚಾಗಿ ಕಂಡುಬರುತ್ತಿರುವುದರ ಜತೆಗೆ ಇಲ್ಲಿರುವವರಲ್ಲೂ ಕೂಡ ಸೋಂಕು ಕಂಡುಬಂದಿದೆ.

ಹೀಗಾಗಿ ಜನ ಸ್ವಯಂ ಜಾಗೃತಿ ವಹಿಸಬೇಕಾದ ಅಗತ್ಯ ಮತ್ತು ಅನಿವಾರ್ಯತೆ ಇದೆ. ಸೋಂಕಿನ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು ಎಂದರು.

Facebook Comments

Sri Raghav

Admin