ಮೃತನಿಂದ ದಿನಸಿ ಕಿಟ್ ಪಡೆದಿದ್ದ ಮಹಿಳೆಗೂ ಅಂಟಿತು ಸೋಂಕು..!

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಬಳ್ಳಾಪುರ, ಏ.25- ಮೃತ ಸೋಂಕಿತನ ಬಳಿ ದಿನಸಿ ಕಿಟ್ ಪಡೆದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ವಿವಿಧ ವಾರ್ಡ್‍ಗಳ ಜನತೆ ತಲ್ಲಣಗೊಂಡಿದ್ದಾರೆ.ಚಿಕ್ಕಬಳ್ಳಾಪುರ ನಗರದಲ್ಲಿ ಇದೀಗ ಮತ್ತೊರ್ವ 39 ವರ್ಷದ ಮಹಿಳೆಗೆ ಕೊರೊನಾ ಪಾಸಿಟಿವ್ ದೃಢಗೊಂಡ ನಂತರ , ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾದಂತಾಗಿದೆ

ಮಾ.5ರಂದು ಈಕೆ ಕೊರೊನಾ ಸೋಂಕಿಗೆ ಬಲಿಯಾದ ವೃದ್ಧ ರೋಗಿ-250ರ ಮನೆಗೆ ತೆರಳಿ ದಿನಸಿ ಕಿಟ್ ಪಡೆದುಕೊಂಡಿದ್ದರು. ಈಕೆಗೆ ಕೊರೊನಾ ಸೋಂಕು ದೃಢವಾಗಿದ್ದು, ದಿನಸಿ ಕಿಟ್ ಪಡೆದ ನಗರದ 17, 13, 12 ಮತ್ತು 14 ನೇ ವಾರ್ಡ್ ಸೇರಿ ನೂರಾರು ಮಂದಿಗೆ ಈಗ ಕೊರೊನಾ ಹರಡಲಿರುವ ಆತಂಕ ಜನರಿಗೆ ಶುರುವಾಗಿದೆ.

ಸೋಂಕಿತ ಮಹಿಳೆ ರೇಷ್ಮೆ ನೂಲಿನ ಕಾರ್ಖಾನೆಯಲ್ಲಿ ರೇಷ್ಮೆ ನೂಲು ಬಿಚ್ಚಣಿಕೆ ಕೆಲಸ ಮಾಡುತ್ತಿದ್ದು, ರೇಷ್ಮೆ ನೂಲು ಕಾರ್ಖಾನೆಯ ಮಾಲೀಕ, ಮಾಲೀಕನ ಹೆಂಡತಿ-ಮಕ್ಕಳು, ಕಾರ್ಖಾನೆಯಲ್ಲಿ ಕೆಲಸ ಮಾಡುವ 6 ಮಂದಿ ಕಾರ್ಮಿಕರು, ಸೋಂಕಿತೆಯ ಅಕ್ಕ-ಭಾವ ಹಾಗೂ ಮಕ್ಕಳು ಸೇರಿದಂತೆ ಒಟ್ಟು 22 ಮಂದಿಯನ್ನು ಪ್ರಥಮ ಸಂಪರ್ಕಿತರೆಂದು ಗುರುತಿಸಲಾಗಿದೆ. ಈ ಎಲ್ಲರನ್ನೂ ಸದ್ಯ ಕ್ವಾರಂಟೈನ್ ಮಾಡಲಾಗಿದೆ.

ಇವರೆಲ್ಲರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಡಿಸಿ ಆರ್.ಲತಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ನಗರದ 65 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗುವ ಮುನ್ನ ಈ ಏರಿಯಾದಲ್ಲಿ ಉಚಿತವಾಗಿ ದಿನಸಿ ಕಿಟ್ ವಿತರಣೆ ಮಾಡಿದ್ದ. ಈ ಪಿ-250 65 ವರ್ಷದ ವೃದ್ಧ ಏಪ್ರಿಲ್ 15 ರಂದು ಮೃತಪಟ್ಟಿದ್ದರು.

ಕೊರೊನ ವೈರಸ್ ಹರಡದಂತೆ ತಡೆಗಟ್ಟಲು ಜಿಲ್ಲಾಡಳಿತ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಪಂಚಾಯ್ತಿ ಹರಸಾಹಸ ಪಡುತ್ತಿದ್ದರೂ ಜನರು ಸೀಲ್‍ಡೌನ್ ಲೆಕ್ಕಿಸದೆ ವಾರ್ಡುಗಳಲ್ಲಿ ನಗರದ ಪ್ರಮುಖ ರಸ್ರೆಗಳಲ್ಲಿ ಅಡ್ಡಾಡತೊಡಗಿದ್ದಾರೆ. ಪೊಲೀಸರಂತೂ ರಸ್ತೆಗಿಳಿದ ಪ್ರತಿಯೊಬ್ಬರನ್ನೂ ಪರಿಶಿಲಿಸಿ ಮುಂದಕ್ಕೆ ಕಳುಹಿಸುವ ಕೆಲಸದಲ್ಲಿ ತೊಡಗಿದ್ದಾರೆ ಆದರೂ ಒಂದಲ್ಲ ಒಂದು ನೆಪ ಹೇಳಿ ರಸ್ತೆಗಳ್ಲಿ ಅಡ್ಡಾಡುತಿದ್ದಾರೆ.

ಹೀಗಾಗಿ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಹಟ್ಟಹಾಸ ಒಂದು ಕಡೆ ಮುಂದುವರೆದಿದ್ದರೆ ಇದಾವುದೂ ನಮಗೆ ಲೆಕ್ಕಕ್ಕಿಲ್ಲ ಎನ್ನುವಂತೆ ಜನ ತಮ್ಮದೇ ಆದ ನೆಪಗಳನ್ನು ಹೇಳಿಕೊಂಡು ತಿರುಗಾಡಲಾರಂಭಿಸಿದ್ದಾರೆ.

# ಅನಶ್ಯಕವಾಗಿ ಓಡಾಡುವವರನ್ನು ಕಡ್ಡಾಯ ಕ್ವಾರಂಟೈನ್ ಗೆ ಒಳಪಡಿಸಿ:

ಆರ್.ಅಶೋಕ ಬೆಂಗಳೂರು ಗ್ರಾಮಾಂತರ, ಏ.25- ರಸ್ತೆಗಳಲ್ಲಿ ಅನವಶ್ಯಕವಾಗಿ ಓಡಾಡುವವರನ್ನು ಕಡ್ಡಾಯವಾಗಿ ಕ್ವಾರಂಟೈನ್‍ಗೆ ಒಳಪಡಿಸಲು ಅಗತ್ಯ ಕ್ರಮವಹಿಸಬೇಕು ಎಂದು ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್. ಅಶೋಕ ಅವರು ಸೂಚಿಸಿದ್ದಾರೆ.

ಹೊಸಕೋಟೆ ನಗರದಲ್ಲಿರುವ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು ಬಹಳಷ್ಟು ಜನರು ಸಾಮಾಜಿಕ ಜವಾಬ್ದಾರಿಯನ್ನು ಮರೆತು ಅನವಶ್ಯಕ ಹಾಗೂ ಅನಗತ್ಯವಾಗಿ ರಸ್ತೆಗಳಲ್ಲಿ ಸಂಚಾರ ಮಾಡುತ್ತಿದ್ದು, ಇದರ ಕಡಿವಾಣಕ್ಕಾಗಿ ಪ್ರತ್ಯೇಕ ಸ್ಥಳವನ್ನು ಗುರುತಿಸಿ ಅಂತಹ ವ್ಯಕ್ತಿಗಳನ್ನು ಕಡ್ಡಾಯವಾಗಿ ಇನ್ಸ್‍ಟ್ಯೂಷನಲ್ ಕ್ವಾರಂಟೈನ್ ಗೆ ಒಳಪಡಿಸಬೇಕು ಎಂದು ಹೇಳಿದರು.

ಕೊರೋನಾ ವೈರಾಣು ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಓಡಾಟವನ್ನು ನಿಬರ್ಂಧಿಸಿದ್ದರೂ, ಅನಗತ್ಯವಾಗಿ ಸಂಚರಿಸುವವರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೂ ಅನವಶ್ಯಕ ಓಡಾಟ ನಿಂತಿಲ್ಲ. ಅದನ್ನು ತಡೆಗಟ್ಟಲು, ರಾಜ್ಯದಲ್ಲೇ ಮೊದಲ ಬಾರಿಗೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿ ಮತ್ತು ಒಳ್ಳೆಯ ಉದ್ದೇಶದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಕಡ್ಡಾಯ ಇನ್ಸ್ ಟ್ಯೂಷನಲ್ ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತಿದ್ದು, ಜಿಲ್ಲೆಯಲ್ಲದೇ ಇಡೀ ಕರ್ನಾಟಕ ರಾಜ್ಯಕ್ಕೆ ಮಾದರಿ ಸಂದೇಶ ಇದಾಗಲಿದೆ ಎಂದು ಹೇಳಿದರು.

ಬೈಲನರಸಾಪುರ ಗ್ರಾಮವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿರುವುದರಿಂದ ಗ್ರಾಮಸ್ಥರಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು. ಸೌಲಭ್ಯಗಳನ್ನು ಮನೆಬಾಗಿಲಿಗೆ ತಲುಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಗ್ರಾಮಸ್ಥರಿಗೆ ಪ್ರತ್ಯೇಕ ಬ್ಯಾಂಕಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಗ್ರಾಮದೊಳಗೆ ಅಥವಾ ಹೊರಗೆ ಯಾರಿಗೂ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ಗ್ರಾಮಕ್ಕೆ ದೊಡ್ಡಬಳ್ಳಾಪುರ ಉಪ ವಿಭಾಗದ ಉಪ ವಿಭಾಗದಿಕಾರಿ ಮಂಜುನಾಥ್ ಅವರನ್ನು ವಿಶೇಷಾಧಿಕಾರಿಯಾಗಿ ನೇಮಿಸಲಾಗಿದ್ದು, ಅವರು ಗ್ರಾಮದ ಸಂಪೂರ್ಣ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ. ಡಿ ಚನ್ನಣ್ಣನವರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಆರ್.ಪ್ರಶಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುಳಾದೇವಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಹರಡುವಿಕೆಯನ್ನು ಆಧರಿಸಿ ಆರೆಂಜ್ ಮತ್ತು ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಉಪ ನೋಂದಣಿ ಅಧಿಕಾರಿಗಳ ಕಚೇರಿಯನ್ನು ತೆರೆಯಲು ಆದೇಶಿಸಲಾಗಿದೆ. ಆನ್‍ಲೈನ್ ಮತ್ತು ಖುದ್ದಾಗಿ ತೆರಳಿ ಸಾರ್ವಜನಿಕರಿಗೆ ಉಪ ನೋಂದಣಿ ಕಚೇರಿಯ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅಲ್ಲದೇ ಬೆಂಗಳೂರು ನಗರ ಪ್ರದೇಶದಲ್ಲಿ ಉಪ ನೋಂದಣಿ ಅಧಿಕಾರಿಗಳ ಕಚೇರಿಯ ಸೌಲಭ್ಯವನ್ನು ಆನ್ ಲೈನ್ ಮೂಲಕ ಪಡೆಯಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರತ್ನ, ಡಾ.ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್ ಪುಷ್ಪ ನಮನ ಸಲ್ಲಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕ ಎನ್.ಎಸ್.ಮಹೇಶ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಾರ್ತಾ ಇಲಾಖೆ ಜಿಲ್ಲಾ ಕಚೇರಿ ಮತ್ತು ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹಿರಿಯೂರಿನ ಡಾ||ರಾಜ್‍ಕುಮಾರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಕೇಶವಮೂರ್ತಿ, ರಾಜ್ ಅಭಿಮಾನಿಗಳ ಸಂಘದ ಕಾರ್ಯದರ್ಶಿ ಮ್ಯಾಕ್ಲೂರಹಳ್ಳಿ ತಿಪ್ಪೇಸ್ವಾಮಿ, ಪಿ.ಎಸ್.ಐ ನಾಗರಾಜ್, ವಿ.ಎ.ರಾಜು, ಆರ್.ತಿಪ್ಪೇಸ್ವಾಮಿ, ಕೃಷ್ಣಮೂರ್ತಿ ಪೂಜÁರ್, ಹುಚ್ಚವ್ವನಹಳ್ಳಿ ಪ್ರಸನ್ನ, ಡಿಂಪಲ್ ಪಾಪಣ್ಣ, ಕೊಟ್ಟಿಗೆ ಮಂಜುನಾಥ್, ಜಗದೀಶ್, ಬಸವರಾಜ್, ಎ.ರಾಘವೇಂದ್ರ, ರಂಗಣ್ಣ, ರಂಗಸ್ವಾಮಿ, ನಾಗೇಶ್, ಚಂದ್ರು ಮತ್ತಿತರರು ಹಾಜರಿದ್ದರು.

Facebook Comments

Sri Raghav

Admin