ಭಾರತದಲ್ಲಿ ಒಂದೇ ದಿನ 22,752 ಮಂದಿಗೆ ಕೊರೋನಾ, 7.42 ಲಕ್ಷ ದಾಟಿದ ಸೋಂಕಿತರ ಸಂಖ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜು.8- ದೇಶದಲ್ಲಿ ಮತ್ತೆ ಒಂದೇ ದಿನ 22,752 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 7,42,417ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಂಖ್ಯೆ ಏರಿಕೆ ಜತೆಗೆ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 20,642ಕ್ಕೆ ಹೆಚ್ಚಳವಾಗಿದೆ. 7 ಲಕ್ಷ ಮಂದಿಯಲ್ಲಿ 4,56,830 ಮಂದಿ ಸೋಂಕಿನಿಂದ ಮುಕ್ತಗೊಂಡಿದ್ದು, 2,64,944 ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕಿತರ ಹೆಚ್ಚಳದೊಂದಿಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವವರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ.

ಇದುವರೆಗೂ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗಳಿಗೆ ದಾಖಲಾಗಿದ್ದ ಶೇ.61.53ರಷ್ಟು ರೋಗಿಗಳು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಬುಲೆಟಿನ್ ಸ್ಪಷ್ಟಪಡಿಸಿದೆ.

ಸೋಂಕಿಗೆ ಗುರಿಯಾಗುತ್ತಿರುವವರಲ್ಲಿ ವಿದೇಶಿಗರು ಹೆಚ್ಚಿರುವುದು ಕಂಡುಬಂದಿದೆ. ಒಟ್ಟಾರೆ ದೇಶದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಮುಂದುವರಿದಿರುವುದು ಸ್ಪಷ್ಟಪಟ್ಟಿದೆ. ಆರನೆ ಬಾರಿಗೆ ಒಂದೇ ದಿನದಲ್ಲಿ 20 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ಕಾಣಿಸಿಕೊಂಡಿರುವುದು ವಿಪರ್ಯಾಸವೇ ಸರಿ.

Facebook Comments