ಭಾರತದಲ್ಲಿ ಕೊರೋನಾ ರಣಕೇಕೆ : 24 ಗಂಟೆಯಲ್ಲಿ 96,424 ಪಾಸಿಟಿವ್, 1174 ಡೆತ್..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಸೆ.18-ದೇಶದಲ್ಲಿ ಕೋವಿಡ್-19 ರಕ್ಕಸನ ದಾಳಿಯ ರಣಕೇಕೆ ಮುಂದುವರಿದಿದೆ. ಕಿಲ್ಲರ್ ಕೊರೊನಾ ದಾಳಿಯ ಎರಡನೇ ಅಲೆ ಆತಂಕದ ನಡುವೆಯೇ, ವೈರಾಣು ಸೋಂಕು ಮತ್ತುಸಾವು ಪ್ರಕರಣಗಳಲ್ಲಿ ನಿರಂತರ ಹೆಚ್ಚಳ ಕಂಡುಬರುತ್ತಿರುವುದು ಭಾರತೀಯರನ್ನು ಮತ್ತಷ್ಟು ಭಯ ಭೀತಗೊಳಿಸಿದೆ.

ಪಾಸಿಟಿವ್ ಪ್ರಕರಣದಲ್ಲಿ ಮತ್ತೆ ಹೊಸ ದಾಖಲೆ ನಿರ್ಮಾಣವಾಗಿದ್ದು, ಒಂದೇ ದಿನ ಸುಮಾರು96,500 ಮಂದಿಗೆ ಸಾಂಕ್ರಾಮಿಕರೋಗ ಕಾಣಿಸಿಕೊಂಡಿದೆ. ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 96,424 (ಬುಧವಾರ 97,894 ಮತ್ತು ಮಂಗಳವಾರ 90,123) ಸೋಂಕು ಪ್ರಕರಣಗಳು ದಾಖಲಾಗಿದೆ..

ಒಂದೇ ದಿನ 1,174 (ಬುಧವಾರ 1,132 ಮತ್ತು ಮಂಗಳವಾರ 1,290) ರೋಗಿಗಳನ್ನು ಕೊರೊನಾ ಮಹಾಮಾರಿ ಬಲಿ ತೆಗೆದುಕೊಂಡಿದೆ. ಸತತ 14ನೇ ದಿನ 1,000ಕ್ಕೂ ಹೆಚ್ಚು ಸಾವು ಸಂಭವಿಸಿದೆ. ಇದರೊಂದಿಗೆ ದೇಶದಲ್ಲಿ ಮೃತರ ಸಂಖ್ಯೆ84,372 ದಾಟಿದೆ ಎಂದು ಕೇಂದ್ರಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಭಾರತದಲ್ಲಿ18 ದಿನಗಳಿಂದಲೂ ಸರಾಸರಿ 90,000 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ನಿನ್ನೆ96,424 ಸೋಂಕು ಪ್ರಕರಣಗಳೊಂದಿಗೆ. ಒಟ್ಟು ರೋಗಿಗಳ ಸಂಖ್ಯೆ52,14,677ಕ್ಕೇರಿದ್ದು, ನಾಳೆ ವೇಳೆಗೆ 53 ಲಕ್ಷ ಮೀರುವ ಸಾಧ್ಯತೆ ಇದೆ. ಆಗಸ್ಟ್ 7ರಂದು 20 ಲಕ್ಷ ಇದ್ದ ಪಾಸಿಟಿವ್ ಪ್ರಕರಣಗಳು ಆ.23ಕ್ಕೆ 30 ಲಕ್ಷಕ್ಕೇರಿತ್ತು. ನಂತರ ಸೆಪ್ಟೆಂಬರ್ 5ರಂದು 40 ಲಕ್ಷದಾಟಿತ್ತು. ಕೇವಲ 11 ದಿನಗಳಲ್ಲಿ ಅಂದರೆ ಸೆ.15ರಂದು 50 ಲಕ್ಷದಾಟಿದೆ.

ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಅಕ್ಟೋಬರ್ ವೇಳೆಗೆ ದೇಶದಲ್ಲಿ 80 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣಗಳು ದಾಖಲಾಗುವ ಆತಂಕವಿದೆ. ಇದರ ನಡುವೆಯೂ ಚೇತರಿಕೆ ಪ್ರಮಾಣದಲ್ಲಿ ಶೇ.78.80ರಷ್ಟು ವೃದ್ದಿ ಕಂಡುಬಂದಿದ್ದು, ಈವರೆಗೆ ದೇಶದಲ್ಲಿ ಸುಮಾರು6.15ಕೋಟಿ ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ದಿ ಕಂಡುಬಂದಿದ್ದರೂ, ಮತ್ತೊಂದೆಡೆ 10.17ಲಕ್ಷಸಕ್ರಿಯ ಪ್ರಕರಣಗಳ ಹೆಚ್ಚಳವೂ ಸಹ ಆತಂಕಕ್ಕೆ ಕಾರಣವಾಗಿದೆ. ಇದರ ನಡುವೆಯೂ ಸುಮಾರು 41.12ಲಕ್ಷ ಮಂದಿ ಹೆಮ್ಮಾರಿಯ ಬಿಗಿಹಿಡಿತದಿಂದ ಪಾರಾಗಿದ್ದಾರೆ.  ದೇಶದಲ್ಲಿ ಈಗ 10,17,756ಆಕ್ಟಿವ್ ಕೇಸ್‍ಗಳಿವೆ. 41,12,554 ಮಂದಿ ಚೇತರಿಸಿಕೊಂಡಿದ್ದು, ಗುಣಮುಖ ಪ್ರಕರಣ ಶೇ.78.80ಕ್ಕೇರಿದ್ದು, ಮರಣ ಪ್ರಮಾಣ ಶೇ.1.67ಕ್ಕೆ ಇಳಿದಿದೆ.

ಸಕ್ರಿಯ ಪ್ರಕರಣಗಳಿಗೆ ಹೋಲಿಸಿದಲ್ಲಿ, ರಿಕವರಿರೇಟ್‍ನಲ್ಲಿನಾಲ್ಕು ಪಟ್ಟುಗಳಿಗಿಂತಲೂ ಅಧಿಕ ಹೆಚ್ಚಳ ಕಂಡುಬಂದಿರುವುದು ಸಮಾಧಾನಕರ ಸಂಗತಿ.  ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳುವರದಿಯಾಗುತ್ತಲೇ ಇವೆÉ. ಮಹಾರಾಷ್ಟ್ರರಾಜ್ಯವು ಸೋಂಕು ಮತ್ತು ಸಾವಿನ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿದಿದೆ.

ದೇಶದಾದ್ಯಂತ ನಿನ್ನೆಒಂದೇ ದಿನ 10,06,615ಲಕ್ಷಕ್ಕೂ ಹೆಚ್ಚುಜನರ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 6,15,72,343ಕೋಟಿಗೂಅಧಿಕಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Facebook Comments