ಭಾರತದಲ್ಲಿ ತಗ್ಗಿದ ಕೊರೊನಾ ಆರ್ಭಟ, 24 ಗಂಟೆಯಲ್ಲಿ 46,760 ಹೊಸ ಕೇಸ್‍..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ,ಅ.20-ಭಾರತದಲ್ಲಿ ಕೊರೊನಾ ವೈರಸ್‍ನ ಆರ್ಭಟ ಗರಿಷ್ಠಕ್ಕೇರಿ ಇಳಿಮುಖವಾಗುತ್ತಿರುವ ಸ್ಪಷ್ಟ ಸೂಚನೆಗಳು ಕಂಡು ಬರುತ್ತಿವೆ. ನಿನ್ನೆ ಮತ್ತೆ ಹೊಸ ಪ್ರಕರಣಗಳಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಇದೇ ವೇಳೆ ಸಾವಿನ ಸಂಖ್ಯೆಯೂ ಸಹ ಗಮನಾರ್ಹವಾಗಿ ತಗ್ಗುತ್ತಿದೆ. 24 ತಾಸುಗಳ ಅವಧಿಯಲ್ಲಿ 46,760 ಹೊಸ ಕೇಸ್‍ಗಳು ದಾಖಲಾಗಿವೆ.

ಬಹುತೇಕ ನಾಲ್ಕು ತಿಂಗಳ ಬಳಿಕ ಇಷ್ಟು ಪ್ರಮಾಣದಲ್ಲಿ ಹೊಸ ಪ್ರಕರಣಗಳು ತಗ್ಗಿರುವುದು ಇದೇ ಮೊದಲು. ಮೊನ್ನೆ 55,722ರಷ್ಟು ಕೇಸ್ ವರದಿಯಾಗಿತ್ತು. ದಿನನಿತ್ಯದ ಪಾಸಿಟಿವ್ ಕೇಸ್‍ಗಳಲ್ಲಿ 60,000ಕ್ಕಿಂತ ಕಡಿಮೆ ವರದಿಯಾಗಿರುವುದು ಈ ತಿಂಗಳಲ್ಲಿ ಇದು ಮೂರನೇ ಬಾರಿ.  ಈ ನಡುವೆ ಸತತ 13 ದಿನಗಳಿಂದಲೂ 9 ಲಕ್ಷಕ್ಕಿಂತ ಕಡಿಮೆ ಮಟ್ಟದಲ್ಲೇ ಸಕ್ರಿಯ ಪ್ರಕರಣಗಳು ವರದಿಯಾಗುತ್ತಿವೆ. ಅಲ್ಲದೇ ಒಂದೂವರೆ ತಿಂಗಳಲ್ಲಿ ನಿರಂತರ ನಾಲ್ಕನೇ ದಿನ 8 ಲಕ್ಷಕ್ಕಿಂತಲೂ ಕಡಿಮೆಯಾಗಿದೆ.

ಇದೇ ವೇಳೆ ದಿನನಿತ್ಯದ ಸಾವು ಪ್ರಕರಣಗಳಲ್ಲೂ ಭಾರೀ ಇಳಿಕೆ ಕಂಡುಬಂದಿದ್ದು, 24 ತಾಸುಗಳ ಅವಧಿಯಲ್ಲಿ 587 ಮಂದಿ ಸೋಂಕು ರೋಗಕ್ಕೆ ಬಲಿಯಾಗಿದ್ದಾರೆ. ಮೊನ್ನೆ 579 ರೋಗಿಗಳನ್ನು ಹೆಮ್ಮಾರಿ ಆಪೆÇೀಶನ ತೆಗೆದುಕೊಂಡಿತ್ತು.  ಇವುಗಳ ನಡುವೆಯೂ ದೇಶದಲ್ಲಿ ಸೋಂಕಿತರ ಪ್ರಮಾಣ 75.97 ಲಕ್ಷ ಮತ್ತು ಮೃತರ ಸಂಖ್ಯೆ 1.15 ಲಕ್ಷ ದಾಟಿರುವುದು ಜನರಲ್ಲಿ ಭಯಾಂತಕ ಮುಂದುವರಿಯುವಂತೆ ಮಾಡಿದೆ.

ಈವರೆಗೆ ಗುಣಮುಖರಾದ ಸೋಂಕಿತರ ಸಂಖ್ಯೆ 67.33 ಲಕ್ಷ ದಾಟಿದೆ. ಚೇತರಿಕೆ ಪ್ರಮಾಣ ಶೇ.88.30ರಷ್ಟು ಏರಿಕೆ ಮತ್ತು ಸಾವಿನ ಪ್ರಮಾಣ ಶೇ.1.51ರಷ್ಟು ತಗ್ಗಿದ್ದು, ಜನರಲ್ಲಿ ನಿರಾಳತೆ ಮೂಡಿದಿದೆ.  ದೇಶದಲ್ಲಿ ಮೃತರ ಸಂಖ್ಯೆ 1,15,198 ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಭಾರತದಲ್ಲಿ ಒಟ್ಟು ರೋಗಿಗಳ ಸಂಖ್ಯೆ 75,97,063ಷ್ಟಿದ್ದು, ಮಧ್ಯಾಹ್ನದ ವೇಳೆಗೆ 76 ಲಕ್ಷ ದಾಟಲಿದೆ.

ಆಗಸ್ಟ್ 7ರಂದು 20 ಲಕ್ಷ ಇದ್ದ ಪಾಸಿಟಿವ್ ಪ್ರಕರಣಗಳು ಆ.23ಕ್ಕೆ 30 ಲಕ್ಷಕ್ಕೇರಿತ್ತು. ನಂತರ ಸೆಪ್ಟೆಂಬರ್ 5ರಂದು 40 ಲಕ್ಷ ದಾಟಿತ್ತು. ಕೇವಲ 11 ದಿನಗಳಲ್ಲಿ ಅಂದರೆ ಸೆ.16ರಂದು 50 ಲಕ್ಷ ದಾಟಿದೆ. ಸೆ.28ರಂದು 60 ಲಕ್ಷ ಮೀರಿದೆ. ಅ.11ರಂದು 70 ಲಕ್ಷ ತಲುಪಿದೆ. ಇನ್ನೆರಡು ದಿನಗಳಲ್ಲಿ 80 ಸಾವಿರ ತಲುಪುವ ಆತಂಕವೂ ಇದೆ. . 45 ದಿನಗಳ ಬಳಿ ಕಳೆದ ನಾಲ್ಕು ದಿನಗಳಿಂದ 8 ಲಕ್ಷಕ್ಕಿಂತ ಕಡಿಮೆ ಇಳಿದಿದ್ದು, ನಿನ್ನೆ 7,48,538 ಸಕ್ರಿಯ ಪ್ರಕರಣಗಳು ವರದಿಯಾಗಿದೆ. ಮೊನ್ನೆ 7,72,055 ದಾಖಲಾಗಿತ್ತು.

ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆÉ. ಮಹಾರಾಷ್ಟ್ರ ರಾಜ್ಯವು ಸೋಂಕು ಮತ್ತು ಸಾವಿನ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿದಿದೆ.

Facebook Comments