ಭಾರತದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.3ಕ್ಕೆ ಕುಸಿತ, 51,667 ಮಂದಿಗೆ ಸೋಂಕು ದೃಢ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜೂ.25-ಒಂದು ದಿನದಲ್ಲಿ 51667 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,01,34,445 ಕೋಟಿಗೆ ಏರಿಕೆಯಾಗಿದ್ದರೂ ವಾರದ ಪಾಸಿಟಿವಿಟಿ ದರ ಶೇ.3ಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಉಲ್ಲೇಖಿಸಿವೆ.

ಕಳೆದ 24 ಗಂಟೆಗಳಲ್ಲಿ 1329 ಮಂದಿ ಮಹಾಮಾರಿಗೆ ಬಲಿಯಾಗಿರುವುದರಿಂದ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 3,93,310 ಲಕ್ಷಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಕೊರೊನಾ ಚೇತರಿಕೆ ಪ್ರಮಾಣ ಶೇ.96.66ಕ್ಕೆ ಏರಿಕೆಯಾಗಿರುವುದರಿಂದ ವಾರದ ಪಾಸಿಟಿವಿಟಿ ರೇಟ್ ಶೇ.3ಕ್ಕೆ ಕುಸಿದಿದ್ದು, ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 6,12ಲಕ್ಷಕ್ಕೆ ಕುಸಿದಿದೆ.

ಕಳೆದ 49 ದಿನಗಳಿಂದ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಮೂರು ಕೋಟಿ ಸೋಂಕಿತರ ಪೈಕಿ ಈಗಾಗಲೇ 2,91 ಕೋಟಿಗೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ದಿನೇ ದಿನೇ ಲಸಿಕೆ ಹಾಕುವ ಪ್ರಮಾಣ ಹೆಚ್ಚಿಸಲಾಗುತ್ತಿದ್ದು, ನಿನ್ನೆ ಒಂದೇ ದಿನ 60.73 ಲಕ್ಷ ಲಸಿಕೆ ಹಾಕುವುದರೊಂದಿಗೆ ಇದುವರೆಗೂ ಸುಮಾರು 31 ಕೋಟಿ ಮಂದಿಗೆ ವ್ಯಾಕ್ಸಿನ್ ಹಾಕಿದಂತಾಗಿದೆ.

Facebook Comments