ವಿಶ್ವದಾದ್ಯಂತ 1.10 ಕೋಟಿ ಕೊರೋನಾ ಸೋಂಕಿತರು, 5.25 ಲಕ್ಷ ಮಂದಿ ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜು.3- ಕೋವಿಡ್-19 ವೈರಸ್ ಹಾವಳಿಯಿಂದ ವಿಶ್ವವ್ಯಾಪಿ ಸೋಂಕಿನ ನಂಜು ಏರುತ್ತಲೇ ಇದ್ದು, ಇಡೀ ಲೋಕವೇ ಪರಿತಪಿಸುವಂತಾಗಿದೆ. 240ಕ್ಕೂ ಹೆಚ್ಚು ದೇಶಗಳಲ್ಲಿ ರೋಗಿಗಳು ಮತ್ತು ಮೃತರ ಸಂಖ್ಯೆ ಅತ್ಯಧಿಕ ಪ್ರಮಾಣದಲ್ಲೇ ಮುಂದುವರಿದಿದೆ.

ಜಗತ್ತಿನಾದ್ಯಂತ ಒಟ್ಟು ಸಾವಿನ ಸಂಖ್ಯೆ 5.25 ಲಕ್ಷ ಹಾಗೂ ಸೋಂಕಿತರ ಸಂಖ್ಯೆ 1.10 ಕೋಟಿ ದಾಟಿದೆ. ಇದರ ನಡುವೆಯೂ ವಿಶ್ವದಲ್ಲಿ ಸುಮಾರು 61,52 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ.

ಜಗತ್ತಿನಾದ್ಯಂತ ನಿನ್ನೆ ಮಧ್ಯರಾತ್ರಿವರೆಗೆ 5,24,188 ಮಂದಿ ಸಾವಿಗೀಡಾಗಿದ್ದು, 1,09,92,462 ಸೋಂಕು ಪ್ರಕರಣಗಳು ವರದಿಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 43.15 ಲಕ್ಷ ದಾಟಿದೆ. ಅಲ್ಲದೇ ಇನ್ನೂ 57,850ಕ್ಕೂ ಹೆಚ್ಚು ರೋಗಿಗಳ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುವ ಆತಂಕವಿದೆ.  ನಾಳೆ ವೇಳೆಗೆ ಸಾವಿನ ಸಂಖ್ಯೆ 5.50 ಲಕ್ಷ ಮತ್ತು ಸಾಂಕ್ರಾಮಿಕ ರೋಗಿಗಳ ಪ್ರಮಾಣ 1.12 ಕೋಟಿ ದಾಟುವ ಆತಂಕವಿದೆ.

ವ್ಯಾಪಕ ಸಾವು-ನೋವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ರೋಗಿಗಳ ಚೇತರಿಕೆ/ಗುಣಮುಖ ಪ್ರಮಾಣದಲ್ಲೂ ವೃದ್ದಿ ಕಂಡುಬಂದಿದೆ. ವಿಶ್ವದಲ್ಲಿ ಈವರೆಗೆ 61,52,472 ಮಂದಿ ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು ಗುಣಮುಖರಾಗಿದ್ದಾರೆ.

ಅಮೆರಿಕ, ಬ್ರೆಜಿಲ್, ರಷ್ಯಾ, ಭಾರತ ಮತ್ತು ಇಂಗ್ಲೆಂಡ್ ಕೊರೊನಾ ಕೇಸ್‍ಗಳಲ್ಲಿ ವಿಶ್ವದ ಟಾಪ್ ಫೈವ್ ದೇಶಗಳಾಗಿವೆ.

Facebook Comments