ಸಮ್ಮಿಶ್ರ ಸರ್ಕಾರದ ಪತನಕ್ಕೆ ಕೌಂಟ್‍ಡೌನ್ ಶುರು

ಈ ಸುದ್ದಿಯನ್ನು ಶೇರ್ ಮಾಡಿ

R.Ashok
ಬೆಂಗಳೂರು,ಸೆ.3-ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕೌಂಟ್‍ಡೌನ್ ಶುರುವಾಗಿದೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದರೂ ಕಾಂಗ್ರೆಸ್-ಜೆಡಿಎಸ್ ಪಕ್ಷವನ್ನು ಜನತೆ ತಿರಸ್ಕರಿಸಿದ್ದಾರೆ. ಇದರಿಂದ ದೋಸ್ತಿ ಸರ್ಕಾರ ಯಾವುದೇ ಸಂದರ್ಭದಲ್ಲೂ ಪತನವಾಗಬಹುದೆಂದು ಹೇಳಿದರು.
ಬಿಜೆಪಿ ನಿರೀಕ್ಷೆಗೆ ತಕ್ಕಂತೆ ಸ್ಥಾನ ಬಾರದಿರಬಹುದು. ಆದರೆ ನಾವು ಎರಡು ಪಕ್ಷಗಳನ್ನು ಮೆಟ್ಟಿ ಹೆಚ್ಚಿನ ಸ್ಥಾನ ಗಳಿಸಿದ್ದೇವೆ. ಇದರಿಂದ ಮುಂದಿನ ಲೋಕಸಭೆ ಚುನಾವಣೆಗೆ ಹೆಚ್ಚು ಆತ್ಮಸ್ಥೈರ್ಯದಿಂದ ಮುನ್ನುಗ್ಗಲು ಅನುಕೂಲವಾಗುತ್ತದೆ ಎಂದರು. ಎಲ್ಲೆಲ್ಲಿ ಅತಂತ್ರವಾಗಿದೆಯೋ ಅಂತಹ ಕಡೆ ಯಾರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುದನ್ನು ರಾಜ್ಯಾಧ್ಯಕ್ಷರಾದ ಯಡಿಯೂರಪ್ಪನವರು ತೀರ್ಮಾನಿಸುತ್ತಾರೆ. ಸ್ಥಳೀಯ ನಾಯಕತ್ವಕ್ಕೂ ನಾವು ಆದ್ಯತೆ ನೀಡಲಿದ್ದು, ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin