ಡೆತ್‍ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Couple-Suicide--01

ಚಿತ್ರದುರ್ಗ, ಆ.9- ಡೆತ್‍ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಳ್ಳಕೆರೆ ಪಟ್ಟಣದ ವಾಸವಿ ಕಾಲೋನಿಯಲ್ಲಿ ನಡೆದಿದೆ. ರಾಘವೇಂದ್ರ (43), ಆರತಿ (35) ಆತ್ಮಹತ್ಯೆ ಮಾಡಿಕೊಂಡ ದಂಪತಿ.   ಮೃತ ರಾಘವೇಂದ್ರ ಅವರು ಪಟ್ಟಣದಲ್ಲಿ ಪ್ರಾವಿಜನ್ ಸ್ಟೋರ್ ನಡೆಸುತ್ತಿದ್ದು, ಕಳೆದ ರಾತ್ರಿ ಡೆತ್‍ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇನೆಂಬುದು ತಿಳಿದು ಬಂದಿಲ್ಲ. ಈ ಸಂಬಂಧ ಚಳ್ಳಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

Sri Raghav

Admin