ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗೆ ಎದುರಾಯ್ತು ಮತ್ತೊಂದು ಸಂಕಷ್ಟ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಏ.23-ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ತೀರ್ಪು ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸುಪ್ರೀಂಕೋರ್ಟ್ ಇಂದು ನ್ಯಾಯಾಲಯ ನಿಂದನೆ ನೋಟಿಸ್ ಜಾರಿಗೊಳಿಸಿದೆ.

ಅಲ್ಲದೇ ತಮ್ಮ ವಿರುದ್ಧದ ನ್ಯಾಯಾಂಗ ನಿಂದನೆಯ ಕ್ರಿಮಿನಲ್ ಪ್ರಕರಣವನ್ನು ಸಮಾಪ್ತಿಗೊಳಿಸುವಂತೆ ಕೋರಿ ರಾಹುಲ್ ಸಲ್ಲಿಸಿರುವ ಮನವಿಯನ್ನೂ ಸುಪ್ರೀಂಕೋರ್ಟ್ ನಿರಾಕರಿಸಿದೆ.

ತನ್ನ ತೀರ್ಪನ್ನು ತೀರ್ಪನ್ನು ರಾಹುಲ್ ತಪ್ಪಾಗಿ ಬಿಂಬಿಸಿದ್ದಾರೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಇದರಿಂದಾಗಿ ಎಐಸಿಸಿ ವರಿಷ್ಠರಿಗೆ ರಫೇಲ್ ವಿಷಯದಲ್ಲಿ ಮತ್ತೊಂದು ಸಂಕಷ್ಟ ಎದುರಾಗಿದೆ.

ರಾಹುಲ್ ವಿರುದ್ಧ ಕ್ರಿಮಿನಲ್ ಪ್ರಕರಣ ಜರುಗಿಸುವಂತೆ ಕೋರಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸಲ್ಲಿಸಿರುವ ಅರ್ಜಿ ಮತ್ತು ರಫೇಲ್ ಜೆಟ್ ಒಪ್ಪಂದ ಕುರಿತು ಡಿಸೆಂಬರ್ 14ರಂದು ತನ್ನ ತೀರ್ಪಿನ ವಿರುದ್ಧ ಸಲ್ಲಿಸಲಾಗಿರುವ ಮರು ಪರಿಶೀಲನೆ ಅರ್ಜಿಯ ವಿಚಾರಣೆಗಳನ್ನು ಏಪ್ರಿಲ್ 30ರಂದು ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.

ಸುಪ್ರೀಂಕೋರ್ಟ್ ತನ್ನ ತೀರ್ಪನ್ನು ತಿರುಚಿ ಹೇಳಿಕೆ ನೀಡಿದ್ದ ರಾಹುಲ್ ಸರ್ವೋಚ್ಚ ನ್ಯಾಯಾಲಯವೇ ಚೌಕಿದಾರ್ ಚೋರ್ ಹೇ (ಪ್ರಧಾನಮಂತಿ ಕಳ್ಳ) ಎಂದಿದೆ ಎಂದು ಹೇಳಿದ್ದರು. ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಕೋರ್ಟ್ ಮೆಟ್ಟಿಲೇರಿದ್ದರು.

ಏಪ್ರಿಲ್ 15ರಂದು ಈ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಏ.22ರೊಳಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕೆಂದು ರಾಹುಲ್ ಅವರಿಗೆ ಸೂಚಿಸಿತ್ತು. ಅದರಂತೆ ನಿನ್ನೆ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದ ರಾಹುಲ್ ಚೌಕಿದಾರ್ ಚೋರ್ ಹೇ ಎಂಬ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿ ಕ್ಷಮೆ ಕೋರಿದ್ದರು.

ಇಂದು ಈ ಪ್ರಕರಣ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠವು. ವಾದಿ(ಮೀನಾಕ್ಷಿ ಲೇಖಿ) ಮತ್ತು ಪ್ರತಿವಾದಿ (ರಾಹುಲ್ ಗಾಂಧಿ) ಅವರ ಪರ ವಕೀಲರಾದ ಮುಕುಲ್ ರೋಹಟಗಿ ಮತ್ತು ಅಭಿಷೇಕ್ ಮನು ಸಿಂಘ್ವಿ ಅವರ ವಾದ ಪ್ರತಿವಾದಗಳನ್ನು ಆಲಿಸಿದರು. ನ್ಯಾಯಮೂತಿಗಳಾದ ದೀಪಕ್ ಗುಪ್ತ ಮತ್ತು ಸಂಜೀವ್ ಖನ್ನಾ ಸಹ ಈ ಪೀಠದಲ್ಲಿದ್ದರು.

ಉಭಯ ಪಕ್ಷಗಾರರ ವಾದ-ಪ್ರತಿವಾದಿಗಳನ್ನು ನಾವು ಆಲಿಸಿದ್ದೇವೆ. ಪ್ರತಿವಾದಿ(ರಾಹುಲ್) ವಿರುದ್ಧ ನ್ಯಾಯಾಲಯ ನಿಂದನೆ ಕ್ರಿಮಿನಲ್ ಪ್ರಕರಣ ಹೂಡುವಂತೆ ವಾದಿ(ಮೀನಾಕ್ಷಿ ಲೇಖಿ) ಕೋರಿದ್ದಾರೆ. ಅವರ ಅರ್ಜಿಯನ್ನು ಮಾನ್ಯ ಮಾಡಬಹುದು ಎಂದು ನಮಗೆ ಅನಿಸುತ್ತಿದೆ.

ಈ ಸಂಬಂದ ನಾವು ಪ್ರತಿವಾದಿಗೆ ನೋಟಿಸ್ ಜಾರಿಗೊಳಿಸುತ್ತಿದ್ದೇವೆ. ಈ ಕುರಿತು ಏ.30ರಂದು ಮುಂದಿನ ವಿಚಾರಣೆ ನಡೆಯಲಿದೆ ಎಂದು ಸಿಜೆಐ ರಂಜನ್ ಗೊಗೊಯಿ ಹೇಳಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin