ಬಿಗ್ ಬ್ರೇಕಿಂಗ್ : ರಾಜ್ಯದಲ್ಲಿ ಕೊರೋನಾ ಕುಣಿತ, ಇಂದು 2313 ಮಂದಿಗೆ ಪಾಸಿಟಿವ್, 57 ಜನ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕಿಲ್ಲರ್ ಕೊರೋನಾ ಮರಣಮೃದಂಗ ಮುಂದುವರೆದಿದ್ದು ಇಂದು ಕೂಡ ಮಹಾಮಾರಿ ತನ್ನ ಅಟ್ಟಹಾಸ ಮೆರೆದಿದೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 2313 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದ್ದು, ಅದೇ ಅವಧಿಯಲ್ಲಿ 57 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 543 ಕ್ಕೆ ರಿಕೆಯಾಗಿದೆ.

ಇಂದಿನ 2313 ಪಾಸಿಟಿವ್ ಪ್ರಕರಣಗಳನ್ನು ಸೇರಿ ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 33418ಕ್ಕೆ ಏರಿಕೆಯಾಗಿದೆ.

ಇದರಲ್ಲಿ ಬೆಂಗಳೂರಿನಲ್ಲೇ 1447 ಪ್ರಕರಣಗಳು ಪತ್ತೆಯಾಗಿದ್ದು, ಸಿಲಿಕಾನ್ ಸಿಟಿ ಜನರು ಬೆಚ್ಚಿಬಿದ್ದಿದ್ದಾರೆ. ಬೆಂಗಳೂರಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15329ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 206 ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಶುಕ್ರವಾರ ಒಂದೇ ದಿನ 1003 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೆ ಬೆಂಗಳೂರಿನಲ್ಲಿ ಇಂದು 601 ಮಂದಿ ಡಿಸ್ಚಾರ್ಜ್ ಆಗಿದ್ದಾರೆ . ಈವರೆಗೆ ಒಟ್ಟು 13836 ಮಂದಿ ಕೊರೋನಾ ಮುಕ್ತರಾಗಿ ಆಸ್ಪತ್ರೆಯಿಂದ ಹೊರಬಂದಿದ್ದಾರೆ.

ರಾಜ್ಯದಲ್ಲಿ ಒಟ್ಟು 19035 ಸಕ್ರಿಯ ಪ್ರಕರಣಗಳಿದ್ದು ಇದರಲ್ಲಿ 472 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ ಒಟ್ಟು 19228 ಕೊರೋನಾ ಟೆಸ್ಟ್ ಮಾಡಲಾಗಿದ್ದು 2313 ಮಂದಿಗೆ ಪಾಸಿಟಿವ್ ಬಂದಿದೆ.

Facebook Comments

Sri Raghav

Admin