ಬಿಗ್ ನ್ಯೂಸ್ : ರಾಜ್ಯದಲ್ಲಿ ಒಂದೇ ದಿನ 10250 ಮಂದಿಗೆ ಕೊರೋನಾ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ದಿನೇ ದಿನೇ ಹೆಚ್ಚುತ್ತಲೇ ಇದ್ದು ಇಂದು ಬರೋಬ್ಬರಿ 10250 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 40 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1065290 ಕ್ಕೆ ಏರಿಕೆಯಾದರೆ , ಒಟ್ಟು 12889 ಮಂದಿ ಬಲಿಯಾಗಿದ್ದಾರೆ.

ಇಂದು ಬೆಂಗಳೂರಿನಲ್ಲಿ 7584 ಜನರಿಗೆ ಕೊರೋನಾ ತಗುಲಿದ್ದು, 27 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ ಒಟ್ಟು 481982 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 4815 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 2638 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 983157 ಜನ ಗುಣಮುಖರಾಗಿದ್ದಾರೆ. ಉಳಿದಂತೆ 69225 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 440ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments

Sri Raghav

Admin