ಭಾರತದಲ್ಲಿ ಕೊರೋನಾ ಅಟ್ಟಹಾಸ : 50,000 ದಾಟಿದ ಸಾವಿನ ಸಂಖ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಆ.16-ದೇಶದಲ್ಲಿ ಡೆಡ್ಲಿ ಕೊರೊನಾ ಸೋಂಕಿನ ಮಹಾ ಸೋಟ ಮುಂದುವರೆದಿದೆ. 24 ತಾಸುಗಳ ಅವಯಲ್ಲಿ 63,500ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಮತ್ತು 944 ಸಾವುಗಳು ಸಂಭವಿಸಿದೆ.

ದೇಶದಲ್ಲೀಗ ಸೋಂಕಿತರ ಸಂಖ್ಯೆ 25.89 ಹಾಗೂ ಸಾವಿನ ಸಂಖ್ಯೆ 50,000 ದಾಟಿರುವುದು ಆತಂಕದ ವಿದ್ಯಮಾನವಾಗಿದೆ. 198 ದಿನಗಳ ಹಿಂದೆ ದೇಶದಲ್ಲಿ ಮೊದಲ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿತ್ತು. ಆದರೆ ಕೇವಲ ಮೂರುವರೆ ತಿಂಗಳ ಅವಯಲ್ಲಿ ಇಂದು ಪಾಸಿಟಿವ್ ಕೇಸ್ 26 ಲಕ್ಷ ಸನಿಹದಲ್ಲಿರುವುದು ಗಂಡಾಂತರಕಾರಿ ಸಂಗತಿಯಾಗಿದೆ.

ಆಗಸ್ಟ್ 7ರಿಂದಲೂ ದೇಶದಲ್ಲಿ 60,000+ ರೋಗ ಪ್ರಕರಣಗಳು (ಆಗಸ್ಟ್ 11ರಂದು 53,609 ಕೇಸ್‍ಗಳನ್ನು ಹೊರತುಪಡಿಸಿ) ವರದಿಯಾಗುತ್ತಿವೆ.  ನಿನ್ನೆಯಿಂದ ಇಂದು ಬೆಳಗ್ಗೆವರೆಗೆ ಮತ್ತೆ ವೈರಸ್ ಸೋಂಕು ಮತ್ತು ಸಾವಿನ ಪ್ರಮಾಣ ಆತಂಕಕಾರಿ ಮಟ್ಟದಲ್ಲೇ ಮುಂದುವರಿದಿದೆ.

ನಿನ್ನೆ 24 ತಾಸುಗಳ ಅವಯಲ್ಲಿ 63,499 (ಮೊನ್ನೆ 65,000ಕ್ಕೂ ಹೆಚ್ಚು) ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದೇ ಅವಯಲ್ಲಿ 944 (ಮೊನ್ನೆ 996 ಸಾವು) ರೋಗಿಗಳು ಮೃತಪಟ್ಟಿದ್ದಾರೆ.

ಅಗಸ್ಟ್ ಮೂರು ಮತ್ತು ನಾಲ್ಕನೇ ವಾರದಲ್ಲಿ ಕೋವಿಡ್-19 ವೈರಸ್ ಅಟ್ಟಹಾಸ ಮತ್ತಷ್ಟು ಹೆಚ್ಚಾಗಲಿದೆ ಎಂದು ಈಗಾಗಲೇ ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದು, ಅದಕ್ಕೆ ಮುನ್ಸೂಚನೆಯಂತೆ ಹೆಮ್ಮಾರಿ ಅಬ್ಬರಿಸಿ ಬೊಬ್ಬರಿಯುತ್ತಿದೆ.

ದೇಶದಲ್ಲಿ ಈಗ ಸೋಂಕಿತರ ಸಂಖ್ಯೆ 26 ಲಕ್ಷ ಸನಿಹದಲ್ಲಿರುವುದು ಮತ್ತು ಮೃತರ ಸಂಖ್ಯೆ 50,000 ದಾಟಿರುವುದು ಆತಂಕಕಾರಿ ಸಂಗತಿಯಾಗಿದೆ..  ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ದಿ ಕಂಡುಬಂದಿದ್ದರೂ, ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ.

ಇದರ ನಡುವೆಯೂ 18.62 ಲಕ್ಷಕ್ಕೂ ಹೆಚ್ಚು ಮಂದಿ ಹೆಮ್ಮಾರಿಯ ಬಿಗಿಹಿಡಿತದಿಂದ ಪಾರಾಗಿದ್ದು, ಚೇತರಿಕೆ ಪ್ರಮಾಣದಲ್ಲಿ ಶೇ.71.91ರಷ್ಟು ಏರಿಕೆ ಕಂಡುಬಂದಿದೆ. 24 ತಾಸುಗಳಲ್ಲಿ ಸುಮಾರು 1,000 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 49,990ಕ್ಕೇರಿದೆ.

ಈವರೆಗೆ ಭಾರತದಲ್ಲಿ ರೋಗಪೀಡಿತರ ಪ್ರಮಾಣ 26,89,682 ದಾಟಿದೆ.  ದೇಶದಲ್ಲಿ ಈಗ 6,77,445ಕ್ಕೂ ಅಕ ಆಕ್ಟಿವ್ ಕೇಸ್‍ಗಳಿದ್ದು, 18,62,258ಕ್ಕೂ ಅಕ ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣ ಶೇ.71.91ರಷ್ಟು ಏರಿಕೆ ಮತ್ತು ಸಾವಿನ ಪ್ರಮಾಣ ಶೇ.1.93ರಷ್ಟು ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ. ದೇಶದ ವಿವಿಧ ರಾಜ್ಯಗಳಲ್ಲಿ ನಿನ್ನೆ ಒಂದೇ ದಿನ 7,46,608 ಜನರ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 2.93 ಕೋಟಿಗೂ ಹೆಚ್ಚು ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Facebook Comments

Sri Raghav

Admin