ಕಳೆದ 24 ಗಂಟೆಯಲ್ಲಿ ದೇಶದಾದ್ಯಂತ 57,981 ಮಂದಿಗೆ ಪಾಸಿಟಿವ್, 941 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಆ.17- ದೇಶದಲ್ಲಿ ಕಳೆದ ಒಂದು ವಾರದಿಂದ ಗಂಡಾಂತರಕಾರಿ ಮಟ್ಟದಲ್ಲಿ ಆರ್ಭಟಿಸಿದ್ದ ಡೆಡ್ಲಿ ಕೊರೊನಾ ಸೋಂಕಿನ ಮಹಾಸೋಟದ ಪ್ರಕೋಪ ಕೊಂಚ ಕಡಿಮೆಯಾಗಿದೆ. 24 ತಾಸುಗಳ ಅವಯಲ್ಲಿ 57,981 ಪಾಸಿಟಿವ್ ಪ್ರಕರಣಗಳು ಮತ್ತು 941 ಸಾವುಗಳು ಸಂಭವಿಸಿದೆ.

ಚೇತರಿಕೆ ಪ್ರಮಾಣದಲ್ಲಿ ಶೇ.72.51ರಷ್ಟು ವೃದ್ಧಿ ಕಂಡುಬಂದಿದ್ದು, ಈವರೆಗೆ ದೇಶದಲ್ಲಿ 3 ಕೋಟಿ ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ದೇಶದಲ್ಲೀಗ ಸೋಂಕಿತರ ಸಂಖ್ಯೆ 26.47 ಹಾಗೂ ಸಾವಿನ ಸಂಖ್ಯೆ 51,000 ಸನಿಹದಲ್ಲಿರುವುದು ಆತಂಕದ ವಿದ್ಯಮಾನವಾಗಿದೆ.

ಆ.7ರಿಂದಲೂ ದೇಶದಲ್ಲಿ 60,000+ ರೋಗ ಪ್ರಕರಣಗಳು (ಆ.11ರಂದು 53,609 ಕೇಸ್‍ಗಳನ್ನು ಹೊರತುಪಡಿಸಿ) ವರದಿಯಾಗುತ್ತಿವೆ. ಮೊನ್ನೆಗೆ ಹೋಲಿಸಿದಲ್ಲಿ 2,500ರಷ್ಟು ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿವೆ. ನಿನ್ನೆಯಿಂದ ಇಂದು ಬೆಳಗ್ಗೆವರೆಗೆ ಮತ್ತೆ ವೈರಸ್ ಸೋಂಕು ಮತ್ತು ಸಾವಿನ ಪ್ರಮಾಣ ಆತಂಕಕಾರಿ ಮಟ್ಟದಲ್ಲೇ ಮುಂದುವರಿದಿದೆ.

ನಿನ್ನೆ 24 ತಾಸುಗಳ ಅವಯಲ್ಲಿ 58,981 (ಮೊನ್ನೆ 63,500ಕ್ಕೂ ಹೆಚ್ಚು) ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದೇ ಅವಯಲ್ಲಿ 941 (ಮೊನ್ನೆ 944 ಸಾವು) ರೋಗಿಗಳು ಮೃತಪಟ್ಟಿದ್ದಾರೆ.

ಅಗಸ್ಟ್ ಮೂರು ಮತ್ತು ನಾಲ್ಕನೆ ವಾರದಲ್ಲಿ ಕೋವಿಡ್-19 ವೈರಸ್ ಅಟ್ಟಹಾಸ ಮತ್ತಷ್ಟು ಹೆಚ್ಚಾಗಲಿದೆ ಎಂದು ಈಗಾಗಲೇ ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದು, ಅದಕ್ಕೆ ಮುನ್ಸೂಚನೆಯಂತೆ ಹೆಮ್ಮಾರಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ.

ದೇಶದಲ್ಲಿ ಈಗ ಸೋಂಕಿತರ ಸಂಖ್ಯೆ 27 ಲಕ್ಷ ಸನಿಹದಲ್ಲಿರುವುದು ಮತ್ತು ಮೃತರ ಸಂಖ್ಯೆ 51,000 ದಾಟಿರುವುದು ಆತಂಕಕಾರಿ ಸಂಗತಿಯಾಗಿದೆ.ಕಳೆದ ಒಂದು ವಾರದಿಂದಲೂ ಭಾರತವು ಪಾಸಿಟಿವ್ ಪ್ರಕರಣದಲ್ಲಿ ವಿಶ್ವದಲ್ಲೇ ನಂ.1 ಮತ್ತು 2ನೆ ಸ್ಥಾನದಲ್ಲಿರುವ ಅಮೆರಿಕ ಮತ್ತು ಬ್ರೆಜಿಲ್‍ಅನ್ನು ಮೀರಿಸಿದೆ.

ಆದರೆ, ಮರಣ ಪ್ರಮಾಣ ಇಳಿಮುಖವಾಗಿರುವುದು ಕೊಂಚ ಸಮಾಧಾನಕರ ಸಂಗತಿಯಾಗಿದೆ. ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ಧಿ ಕಂಡುಬಂದಿದ್ದರೂ, ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ.

ಇದರ ನಡುವೆಯೂ 19.19 ಲಕ್ಷಕ್ಕೂ ಹೆಚ್ಚು ಮಂದಿ ಹೆಮ್ಮಾರಿಯ ಬಿಗಿಹಿಡಿತದಿಂದ ಪಾರಾಗಿದ್ದು, ಚೇತರಿಕೆ ಪ್ರಮಾಣದಲ್ಲಿ ಶೇ.72.51ರಷ್ಟು ಏರಿಕೆ ಕಂಡುಬಂದಿದೆ. 24 ತಾಸುಗಳಲ್ಲಿ ಸುಮಾರು 950 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 50,921ಕ್ಕೇರಿದೆ.

ಈವರೆಗೆ ಭಾರತದಲ್ಲಿ ರೋಗ ಪೀಡಿತರ ಪ್ರಮಾಣ 26,47,663 ದಾಟಿದೆ. ದೇಶದಲ್ಲಿ ಈಗ 6,76,900ಕ್ಕೂ ಅಕ ಆಕ್ಟಿವ್ ಕೇಸ್‍ಗಳಿದ್ದು, 18,62,258ಕ್ಕೂ ಅಕ ರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ.

ಚೇತರಿಕೆ ಪ್ರಮಾಣ ಶೇ.72,51ರಷ್ಟು ಏರಿಕೆ ಮತ್ತು ಸಾವಿನ ಪ್ರಮಾಣ ಶೇ.1.92ರಷ್ಟು ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ.

ದೇಶದ ವಿವಿಧ ರಾಜ್ಯಗಳಲ್ಲಿ ನಿನ್ನೆ ಒಂದೇ ದಿನ 7,36,697 ಜನರ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 3 ಕೋಟಿಗೂ ಹೆಚ್ಚು ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Facebook Comments

Sri Raghav

Admin