ಕೊರೋನಾ ಬುಲೆಟಿನ್ : ರಾಜ್ಯದಲ್ಲಿಂದು 7576 ಮಂದಿಗೆ ಪಾಸಿಟಿವ್, 97 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೋನಾ ಅಬ್ಬರ ಮುಂದುವರೆದಿದ್ದು 7576 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 97 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 475265 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 7481ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 3084 ಜನರಿಗೆ ಕೊರೋನಾ ತಗುಲಿದ್ದು, 41 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 176712 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 2514 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 7406 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 369229 ಜನ ಗುಣಮುಖರಾಗಿದ್ದಾರೆ. ಉಳಿದಂತೆ 98536 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 794 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments

Sri Raghav

Admin