ಭಾರತದಲ್ಲಿ ಕಂಟ್ರೋಲ್ ಮೀರಿ ಹರಡುತ್ತಿದೆ ಕೊರೋನಾ : ಒಂದೇ ದಿನ 5,609 ಪಾಸಿಟಿವ್, 132 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ಮುಂಬೈ, ಮೇ 21- ಭಾರತದಲ್ಲಿ ವಿನಾಶಕಾರಿ ಕೊರೊನಾ ಆಕ್ರಮಣದ ತೀವ್ರತೆಯಲ್ಲಿ ಮಹಾಸ್ಫೋಟ ಸ್ಥಿತಿಯಲ್ಲಿಯೇ ಮುಂದುವರಿದಿದೆ. ನಿನ್ನೆ ಒಂದೇ ದಿನಅಂದರೆ 24 ತಾಸುಗಳ ಅವಧಿಯಲ್ಲಿ 132 ಮಂದಿ ಸಾವಿಗೀಡಾಗಿದ್ದು, 5,609 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮೊನ್ನೆಒಂದೇ ದಿನ 5,611 ಜನರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ನಿನ್ನೆಯೂಕೂಡ ಸೋಂಕಿನಲ್ಲಿ ಭಾರೀ ಜಿಗಿತ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಕಿಲ್ಲರ್ ವೈರಸ್ ಆರ್ಭಟ ಲಾಕ್‍ಡೌನ್ ಸಡಿಲಿಕೆ ನಂತರದಿನೇ ದಿನೇ ವ್ಯಾಪಕವಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಭಾರತದಲ್ಲಿ ಸಾವಿನ ಸಂಖ್ಯೆ 3,450ದಾಟಿದ್ದು.

ಸೋಂಕು ಪೀಡಿತರ ಸಂಖ್ಯೆ 1,12,360ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇದು ಸರಾಸರಿ 5,000 ಪಾಸಿಟಿವ್ ಕೇಸ್‍ದಾಖಲಾದ ಸತತ ಐದನೇ ದಿನ. ಮೇ 1ರಿಂದಲೂ ಅತಿ ಹೆಚ್ಚು ಸೋಂಕು ಪ್ರಕರಣಗಳು ದೇಶದ ವಿವಿಧ ರಾಜ್ಯಗಳಲ್ಲಿ ವರದಿಯಾಗುತ್ತಲೇ ಇವೆ.

ನಿನ್ನೆ ಬೆಳಗ್ಗೆ 8 ಗಂಟೆಯಿಂದ 24 ಗಂಟೆಗಳ ಅವಧಿಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ 132 ಮಂದಿಯನ್ನು ಕಿಲ್ಲರ್ ಕೊರೊನಾ ಬಲಿ ತೆಗೆದುಕೊಂಡಿದೆ. ಮಹಾರಾಷ್ಟ್ರದಲ್ಲಿ 65,ಗುಜರಾತ್‍ನಲ್ಲಿ 30,ಮಧ್ಯಪ್ರದೇಶ9,ದೆಹಲಿ 8,ರಾಜಸ್ತಾನ ಮತ್ತು ಉತ್ತರ ಪ್ರದೇಶತಲಾ 5, 14, ದೆಹಲಿ 8, ರಾಜಸ್ತಾನ ಮತ್ತು ಉತ್ತರ ಪ್ರದೇಶ 4, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ತಲಾಒಂದು ಸಾವು ಪ್ರಕರಣ ವರದಿಯಾಗಿದೆ.

ನಿನ್ನೆ ಮಧ್ಯರಾತ್ರಿವರೆಗೆ ಲಭಿಸಿದ ಮಾಹಿತಿ ಪ್ರಕಾರದೇಶದಲ್ಲಿ ಡೆಡ್ಲಿ ಕೋವಿಡ್-19 ವೈರಸ್‍ಗೆ ಬಲಿಯಾದವರ ಸಂಖ್ಯೆ3,435ಕ್ಕೇರಿದ್ದು, ಸಾಂಕ್ರಾಮಿಕ ರೋಗಿಗಳ ಸಂಖ್ಯೆ 1,12,359ತಲುಪಿದೆ. ಇಂದು ಮಧ್ಯರಾತ್ರಿಯೊಳಗೆ ಸೋಂಕಿತರ ಪ್ರಮಾಣ1.16 ಲಕ್ಷದಾಟುವ ಆತಂಕವೂ ಇದೆ.

ಲಾಕ್‍ಡೌನ್ ಸಡಿಲ ನಂತರದೇಶದ ವಿವಿಧ ರಾಜ್ಯಗಳಲ್ಲಿ ಕೊರೊನಾ ಮಹಾಸ್ಫೋಟವಾಗಿದ್ದು, ಸಾವು-ಸೋಂಕು ವ್ಯಾಪಕವಾಗಿ ಉಲ್ಬಣಗೊಂಡಿದೆ. ಒಂದೆಡೆಚೇತರಿಕೆ ಪ್ರಮಾಣದಲ್ಲಿ ಶೇ.40.32ರಷ್ಟು ಸುಧಾರಣೆ ಕಂಡು ಬಂದಿದ್ದರೂ, ಮತ್ತೊಂದೆಡೆ ದಿನನಿತ್ಯ ಮರಣ ಮತ್ತು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಲೇಇದೆ.

ಈವರೆಗೆ ಸಂಭವಿಸಿರುವ 3,435 ಸಾವು ಪ್ರಕರಣಗಳಲ್ಲಿ, ಮಹಾರಾಷ್ಟ್ರ ಎಂದಿನಂತೆ ಪ್ರಥಮ ಸ್ಥಾನದಲ್ಲಿಯೇ ಮುಂದುವರಿದಿದೆ. ಆ ರಾಜ್ಯದಲ್ಲಿ ಒಟ್ಟು 1,390 ಸಾವುಗಳು ಸಂಭವಿಸಿದ್ದು,ಮಹಾರಾಷ್ಟ್ರದಲ್ಲಿ ಸುಮಾರು 39,297 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಎರಡನೇ ಸ್ಥಾನದಲ್ಲಿರುವ ಗುಜರಾತ್‍ನಲ್ಲಿ 749 ಸಾವುಗಳು ಸಂಭವಿಸಿವೆ. ನಂತರದ ಸ್ಥಾನಗಳಲ್ಲಿ ಮಧ್ಯಪ್ರದೇಶ (267), ಪಶ್ಚಿಮ ಬಂಗಾಳ (253), ದೆಹಲಿ (176). ರಾಜಸ್ತಾನ (147),ಉತ್ತರ ಪ್ರದೇಶ (127),ತಮಿಳುನಾಡು (87), ಆಂಧ್ರಪ್ರದೇಶ(53), ಕರ್ನಾಟಕ(41),ತೆಲಂಗಾಣ(40) ಹಾಗೂ ಪಂಜಾಬ್ (38) ರಾಜ್ಯಗಳಿವೆ.

ಜಮ್ಮು-ಕಾಶ್ಮೀರ 18, ಹರಿಯಾಣ 14,ಬಿಹಾರಹತ್ತು, ಒಡಿಶಾ ಆರು, ಕೇರಳ ಮತ್ತುಅಸ್ಸಾಂತಲಾನಾಲ್ಕು, ಜಾರ್ಖಂಡ್, ಚಂಡಿಗಢ, ಮತ್ತು ಹಿಮಾಚಲ ಪ್ರದೇಶತಲಾ ಮೂರು,ಹಾಗೂ ಪುದುಚೇರಿ, ಮೇಘಾಲಯ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ತಲಾ ಒಂದೊಂದು ಸಾವುಗಳು ವರದಿಯಾಗಿವೆ.

ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಸಹ ಹೆಚ್ಚಾಗುತ್ತಿದ್ದು, 63,624ರಷ್ಟಿದೆ. ಈ ಮಧ್ಯೆ, ಈವರೆಗೆ 45,299 (ಚೇತರಿಕೆ ಪ್ರಮಾಣ ಶೇ.40.32) ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ವೈರಾಣು ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ವೃದ್ದಿ ಕಂಡುಬಂದಿರುವುದು ಸಮಾಧಾನಕರ ಸಂಗತಿಯಾದರೂ, ಮತ್ತೊಂದಡೆ ಸೋಂಕು ಮತ್ತು ಸಾವು ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ.

ಇಂದುಬೆಳಗ್ಗೆಯೂ ಕೆಲವು ರಾಜ್ಯಗಳಲ್ಲಿ ಸಾವು ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ರಾಜಸ್ತಾನ, ಪಶ್ಚಿಮ ಬಂಗಾಳ,ದೆಹಲಿ, ಕರ್ನಾಟಕ, ತಮಿಳುನಾಡು, ತೆಲಂಗಾಣ,ಆಂಧ್ರಪ್ರದೇಶ, ಪಂಜಾಬ್, ಓಡಿಶಾ ಮತ್ತಿತರ ರಾಜ್ಯಗಳಲ್ಲಿ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಹೆಮ್ಮಾರಿ ನಿಗ್ರಹಕ್ಕಾಗಿ ಕೆಲವು ನಿರ್ಬಂಧಗಳ ಸಡಿಲಿಕೆಯೊಂದಿಗೆ ನಾಲ್ಕನೇ ಹಂತದ ಲಾಕ್‍ಡೌನ್‍ಜಾರಿಯಲ್ಲಿದ್ದು, ಇದರ ಬೆನ್ನಲ್ಲೇಆತಂಕಕಾರಿ ವಾತಾವರಣವೂ ನಿರ್ಮಾಣವಾಗಿದೆ. ಈಗಾಗಲೇ ಜಾರಿಗೆ ಬಂದಿರುವ ಲಾಕ್‍ಡೌನ್-4 ಈ ತಿಂಗಳಾಂತ್ಯದವರೆಗೂ ವಿಸ್ತರಣೆಯಾಗಿದೆ.

ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸಿ ಆರ್ಥಿಕ ಪುನ:ಶ್ಚೇತನ ಮತ್ತು ಸಾರ್ವಜನರಿಗೆ ಅನುಕೂಲ ಕಲ್ಪಿಸಿದ್ದರೂ, ಕೊರೊನಾ ದಾಳಿ ಮತ್ತಷ್ಟು ತೀವ್ರವಾಗುವ ಆತಂಕವೂ ಎದುರಾಗಿದೆ.

Facebook Comments

Sri Raghav

Admin