ತಮಿಳುನಾಡಿನಲ್ಲಿ ಆ.31ರ ವರೆಗೆ ಲಾಕ್‍ಡೌನ್ ವಿಸ್ತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಚೆನ್ನೈ, ಜು.30- ಡೆಡ್ಲಿ ಕೊರೊನಾ ಹಾವಳಿ ಹೆಚ್ಚಾಗಿ ಸೋಂಕು ಮತ್ತು ಸಾವು ಪ್ರಕರಣಗಳು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕೆಲವು ಸಡಿಲಿಕೆಗಳೊಂದಿಗೆ ತಮಿಳುನಾಡಿನಲ್ಲಿ ಆಗಸ್ಟ್ 31ರ ವರೆಗೆ ಲಾಕ್‍ಡೌನ್ ವಿಸ್ತರಿಸಲಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಯರಪ್ಪಾಡಿ ಪಳನಿ ಸ್ವಾಮಿ ಚೆನ್ನೈನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.ರಾಜ್ಯಾದ್ಯಂತ ಪ್ರತಿ ಭಾನುವಾರ ಸಂಪೂರ್ಣ ಲಾಕ್‍ಡೌನ್ ಜಾರಿಯಲ್ಲಿರುತ್ತದೆ.

ಆಗಸ್ಟ್ 31ರ ವರೆಗೆ ಕೆಲವು ವಿನಾಯಿತಿಗಳೊಂದಿಗೆ ಕಠಿಣ ಲಾಕ್‍ಡೌನ್ ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.ಮಹಾರಾಷ್ಟ್ರ, ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ಅತಿ ಹೆಚ್ಚು ಸೋಂಕು ಮತ್ತು ಸಾವು ಪ್ರಕರಣಗಳು ಇರುವ ಐದು ರಾಜ್ಯಗಳಲ್ಲಿ ತಮಿಳುನಾಡು ಸಹ ಸ್ಥಾನ ಪಡೆದಿದೆ.

ಲಾಕ್‍ಡೌನ್ ವಿಸ್ತರಿಸಿದ್ದರೂ ರಾಜ್ಯದಲ್ಲಿ ರೋಗಿಗಳು ಮತ್ತು ಮೃತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆ.31ರ ವರೆಗೆ ಶರತ್ತುಗಳಿಗೆ ಒಳಪಟ್ಟು ಕೆಲವು ವಿನಾಯಿತಿಗಳೊಂದಿಗೆ ಲಾಕ್‍ಡೌನ್ ವಿಸ್ತರಿಸಲಾಗಿದೆ.

ಆಗಸ್ಟ್ ತಿಂಗಳ ಎಲ್ಲ ಐದು ಭಾನುವಾರ ಸಂಪೂರ್ಣ ಲಾಕ್‍ಡೌನ್ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Facebook Comments

Sri Raghav

Admin