ರಾಜ್ಯಗಳ ಪ್ರಸ್ತುತ ಕರೋನ ಸ್ಥಿತಿಯ ಬಗ್ಗೆ ವರದಿ ಕೇಳಿದ ಸುಪ್ರೀಂ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ನ.23- ಕೋವಿಡ್ ಸೋಂಕು ಹೆಚ್ಚಾಗಿರುವ ನಾಲ್ಕು ರಾಜ್ಯಗಳು ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲೂ ಸೋಂಕಿನ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಎರಡು ದಿನಗಳ ಒಳಗೆ ವರದಿ ನೀಡುವಂತೆ ಸುಪ್ರೀಂಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಎಸ್.ರೆಡ್ಡಿ, ಎಂ.ಆರ್. ಷಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್‍ನ ವಿಭಾಗೀಯ ಪೀಠ ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಕೆಲವು ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಗುಜರಾತ್‍ನಲ್ಲಿ ಪರಿಸ್ಥಿತಿ ಕೈಮೀರಿ ಹೋಗಿದೆ. ನವೆಂಬರ್‍ನಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಹೀನಾಯ ಪರಿಸ್ಥಿತಿ ಇತ್ತು.

ಅಸ್ಸಾಂ ಮತ್ತು ಮಹಾರಾಷ್ಟ್ರಗಳಲ್ಲೂ ಸೋಂಕು ಹೆಚ್ಚಾಗಿದೆ. ಎಲ್ಲ ರಾಜ್ಯಗಳಲ್ಲೂ ವಾಸ್ತವ ಸ್ಥಿತಿ ಏನಿದೆ ಎಂಬುದನ್ನು ಎರಡು ದಿನಗಳೊಳಗೆ ಸುಪ್ರೀಂಕೋರ್ಟ್‍ಗೆ ವರದಿ ಸಲ್ಲಿಸಬೇಕೆಂದು ನ್ಯಾಯಾೀಶರು ದೆಹಲಿ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಸಂಜಯ್ ಜೈನ್ ಅವರಿಗೆ ಸೂಚನೆ ನೀಡಿದ್ದಾರೆ.

ಸೋಂಕಿನ ನಿಯಂತ್ರಣಕ್ಕೆ ಚಿಕಿತ್ಸೆಗೆ ಮತ್ತು ಮೃತಪಟ್ಟ ಪಾರ್ಥೀವ ಶರೀರಗಳ ಗೌರವಯುತ ಅಂತ್ಯಕ್ರಿಯೆಗೆ ಯಾವ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ವರದಿ ನೀಡುವಂತೆ ನ್ಯಾಯಾೀಶರು ತಾಕೀತು ಮಾಡಿದ್ದಾರೆ.
ಮುಂದಿನ ವಿಚಾರಣೆಯನ್ನು ನ.27ಕ್ಕೆ ಮುಂದೂಡಲಾಗಿದೆ.

Facebook Comments