ಅನಗತ್ಯ ಕೋವಿಡ್ ಪರೀಕ್ಷೆ ಸ್ಥಗಿತ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.15-ನಗರದಲ್ಲಿ ಪ್ರತಿನಿತ್ಯ 200ಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗುತ್ತಿದ್ದು, ಪಾಸಿಟಿವಿಟಿ ದರ ಶೇ.0.60ಕ್ಕಿಂತ ಕಡಿಮೆಯಿದೆ. ಹೀಗಾಗಿ, ಕಳೆದೊಂದು ವಾರದಿಂದ ಅನಗತ್ಯ ಕೋವಿಡ್ ಪರೀಕ್ಷೆ ಸ್ಥಗಿತಗೊಳಿಸಿದ್ದು, ಪ್ರತಿನಿತ್ಯ ಸರಾಸರಿ 55 ಸಾವಿರಕ್ಕಿಂತ ಕಡಿಮೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ.

ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಬಂದವರು (ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರು), ಒಂದು ಮನೆ ಅಥವಾ ಅಪಾರ್ಟ್‍ಮೆಂಟ್‍ನಲ್ಲಿ 3 ಕ್ಕಿಂತ ಅಧಿಕ ಸೋಂಕಿತರು ಪತ್ತೆಯಾಗಿ ಕ್ಲಸ್ಟರ್ ಕಂಟೈನ್ಮೆಂಟ್ ಮಾಡಿದ 100 ಮೀಟರ್ ವ್ಯಾಪ್ತಿಯ ನಿಗದಿತ ಜನರನ್ನು (ಟಾರ್ಗೆಟೆಡ್ ಪೀಪಲï) ಮಾತ್ರ ಪ್ರತಿ ನಿತ್ಯ ಸೋಂಕು ಪರೀಕ್ಷೆ ಮಾಡುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಸೂಚಿಸಲಾಗಿದೆ.

ಮತ್ತೊಂದೆಡೆ, ಯಾವುದೇ ಕೋವಿಡ್ ಲಕ್ಷಣಗಳಿಲ್ಲದೆ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದಕ್ಕೆ ಬಿಬಿಎಂಪಿ ಬ್ರೇಕ್ ಹಾಕಿದೆ. ಇದಕ್ಕಾಗಿ ಸರ್ಕಾರ ನೀಡಿದ್ದ ದಿನನಿತ್ಯ ಟೆಸ್ಟಿಂಗ್ ಗುರಿಯನ್ನು ತಲುಪಲು ಸಾಧ್ಯವಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ.

ರಾಜಧಾನಿಯಲ್ಲಿ 1.2 ಕೋಟಿಗೂ ಅಧಿಕ ಜನರಿದ್ದು, ಪ್ರತಿನಿತ್ಯ ಸಾವಿರಾರು ಜನರು ಹೊರ ರಾಜ್ಯ, ವಿದೇಶಗಳಿಂದ ನಗರಕ್ಕೆ ಆಗಮಿಸುತ್ತಾರೆ. ಅವರೆಲ್ಲರೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ವರದಿ ಬರುವವರೆಗೆ ಮತ್ತು ಕ್ವಾರಂಟೈನ್ ಆಗಬೇಕಿದೆ. ಆದರೆ, ನಗರದಿಂದ ಹೊರ ರಾಜ್ಯ, ವಿದೇಶಕ್ಕೆ ಪ್ರಯಾಣ ಮಾಡುವವರು ಹಾಗೂ ದೀರ್ಘಾ ವಧಿ ರಜೆಯ ನಂತರ ಕೆಲವು ಉದ್ಯೋಗಿಗಳು ಕಚೇರಿಗಳಿಗೆ ಭೌತಿಕ ಹಾಜರಾಗಲು ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯವಾಗಿದೆ. ಹೀಗಾಗಿ, ಜನರು ಖಾಸಗಿ ಲ್ಯಾಬ್‍ಗಳಿಗೆ ಹೋಗಿ ಕೋವಿಡ್ ಪರೀಕ್ಷೆ ಮಾಡಿಸದೆ ಪಾಲಿಕೆಯ ಕೇಂದ್ರಗಳಿಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದರು.

ಸಾರ್ವಜನಿಕರು ತಮ್ಮ ವೈಯಕ್ತಿಕ ಕಾರ್ಯಕ್ಕೆ ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬಂದು ಪರೀಕ್ಷೆ ಮಾಡಿಕೊಳ್ಳುವುದರಿಂದ ಪಾಲಿಕೆಗೆ ಹೆಚ್ಚಿನ ಆರ್ಥಿಕ ಹೊರೆಯಾಗುತ್ತಿತ್ತು. ಕೆಲವು ಸಂದರ್ಭ ದಲ್ಲಿ ಪ್ರಭಾವ ಬಳಸಿ ಅನಗತ್ಯವಾಗಿ ಆರ್‍ಟಿ-ಪಿಸಿಆರ್ ಮತ್ತು ರ್ಯಾಪಿಡ್ ಆ್ಯಂಟಿಜೆನ್ ಟೆ¸್ಟï (ಆರ್‍ಎಟಿ) ಎರಡೂ ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದರು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕೋವಿಡ್ ಲಕ್ಷಣ ರಹಿತ ಜನರಿಗೆ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಮಾಡುವುದನ್ನು ನಿಲ್ಲಿಸುವಂತೆ ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಎಲ್ಲ ವಲಯಗಳ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

Facebook Comments