ವಿದೇಶದಿಂದ ಬಂದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ನ.29- ವಿದೇಶದಿಂದ ಆಗಮಿಸುವ ಪ್ರತಿಯೊಬ್ಬರಿಗೂ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರ ಇಂದು ಹೊಸದಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮೊದಲು ನ.11ರಂದು ಹೊರಡಿಸಿದ್ದ ಮಾರ್ಗಸೂಚಿಗಳಲ್ಲಿ ಬದಲಾವಣೆ ಮಾಡಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪರಿಷ್ಕøತ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ.

ಜಾಗತಿಕವಾಗಿ ಹೊಸ ರೂಪಾಂತರಿ ಓಮಿಕ್ರಾನ್ ನ.24ರಂದು ದಕ್ಷಿಣ ಆಫ್ರಿಕಾ ಸೇರಿದಂತೆ ವಿವಿಧ ದೇಶಗಳಲ್ಲಿ ಪತ್ತೆಯಾಗಿ ಆತಂಕ ಮೂಡಿಸಿದೆ. ಓಮಿಕ್ರಾನ್ ಕಾಣಿಸಿಕೊಂಡಿರುವ ದೇಶಗಳಿಂದ ಆಗಮಿಸುವ ಪ್ರಯಾಣಿಕರು ಕೋವಿಡ್ ಲಸಿಕೆ ಪಡೆದಿದ್ದರೂ ಕೂಡ ವಿಮಾನ ನಿಲ್ದಾಣದಲ್ಲಿ ಜಿನೊಮೆಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡುವುದು ಕಡ್ಡಾಯವಾಗಿದೆ.

ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬಂದರೆ ಅವರು ವಿಮಾನ ನಿಲ್ದಾಣದಿಂದ ಹೊರಹೋಗಬಹುದು. ಆದರೆ ಕಡ್ಡಾಯವಾಗಿ 7 ದಿನ ಕ್ವಾರಂಟೈನ್ನಲ್ಲಿರಬೇಕು. 8 ನೇ ದಿನ ಸ್ವಯಂ ನಿಗಾವಣೆಯ ಮಾಹಿತಿ ನೀಡಬೇಕು.

ಒಂದು ವೇಳೆ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದರೆ ಅವರು ಪ್ರತ್ಯೇಕವಾಗಿ ಉಳಿದುಕೊಳ್ಳಬೇಕು. ಕ್ಲಿನಿಕಲ್ ನಿರ್ವಹಣೆ, ಶಿಷ್ಟಾಚಾರ ಪಾಲನೆ ಮತ್ತು ಚಿಕಿತ್ಸೆ ಪಡೆಯುವುದು ಕಡ್ಡಾಯವಾಗಿದೆ. ಒಂದು ವೇಳೆ ಯಾರಾದರೂ ಈ ನಿಯಮ ಉಲ್ಲಂಘಿಸಿದರೆ ಶಿಕಾರ್ಹ ಕಾನೂನಿನಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ವಿದೇಶ ಪ್ರಯಾಣ ಮಾಡಬಯಸುವವರು ಸುವಿಧ ಹೋಟೆಲ್ನಲ್ಲಿ ತಮ್ಮ 14 ದಿನಗಳ ಪ್ರಯಾಣದ ಮಾಹಿತಿಯನ್ನು ದಾಖಲಿಸಬೇಕು. 72 ಗಂಟೆಗಳ ಅವಯಲ್ಲಿ ನಡೆಸಿರುವ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ಫಲಿತಾಂಶದ ವರದಿ ಲಗತ್ತಿಸಬೇಕು ಎಂದು ಸೂಚಿಸಲಾಗಿದೆ.

ದೇಶದ ನಾಗರಿಕರು ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ, ಕೈ ನಿರ್ಮಲೀಕರಣ ಸೇರಿದಂತೆ ಕೋವಿಡ್ ಶಿಷ್ಟಾಚಾರವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಕೇಂದ್ರ ಸರ್ಕಾರ ತಾಕೀತು ಮಾಡಿದೆ.

5 ವರ್ಷದೊಳಗಿನ ಮಕ್ಕಳಿಗೆ ಪರೀಕ್ಷೆಯಿಂದ ವಿನಾಯ್ತಿ ನೀಡಲಾಗಿದೆ. ಆದರೆ ಮಕ್ಕಳಲ್ಲಿ ಪ್ರಯಾಣದ ವೇಳೆ ಕೋವಿಡ್ ಲಕ್ಷಣ ಕಂಡುಬಂದರೆ ಪರೀಕ್ಷೆಗೊಳಪಡಿಸುವುದು ಅನಿವಾರ್ಯ ಎಂದು ಪರಿಷ್ಕøತ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.

Facebook Comments

Sri Raghav

Admin