ಕೋವಿಡ್‌ ಮೂರನೇ ಅಲೆ: ತಜ್ಞರ ಸಮಿತಿ ರಚಿಸಲು ಹೊರಟ್ಟಿ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ: ಕೋವಿಡ್‌ ಮೂರನೇ ಅಲೆಗೆ ತುತ್ತಾದ ದೇಶಗಳಲ್ಲಿ ಮಕ್ಕಳ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಆದ್ದರಿಂದ ರಾಜ್ಯ ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಮೂರನೆ ಅಲೆಯ ಬಗ್ಗೆ ಅಧ್ಯಯನ ನಡೆಸಲು ವಿಶೇಷ ತಜ್ಞರ ಸಮಿತಿ ರಚಿಸಬೇಕು ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ‍ ಅವರಿಗೆ ಪತ್ರ ಬರೆದಿದ್ದಾರೆ.

ಮೂರನೇ ಅಲೆಯಿಂದ ಮಕ್ಕಳ ಮೇಲೆ ಬೀರಬಹುದಾದ ಪರಿಣಾಮಗಳು ಹಾಗೂ ಇದರ ಬಗ್ಗೆ ಯಾವುದೇ ಹೆಚ್ಚಿನ ಅಧ್ಯಯನ, ವರದಿಗಳು ಲಭ್ಯವಿಲ್ಲದ ಕಾರಣ ಸಮಿತಿ ರಚಿಸುವ ಅಗತ್ಯವಿದೆ. ತಜ್ಞರಿಂದ ಸಂಪೂರ್ಣವಾದ ವರದಿ ಪಡೆದು ಕೈಗೊಳ್ಳಬೇಕಾದ ಅವಶ್ಯಕ ಕ್ರಮಗಳ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಆಗ್ರಹಿಸಿದ್ದಾರೆ.

Facebook Comments