ಜುಲೈ,ಆಗಸ್ಟ್ ನಿಂದ ಹೆಚ್ಚಲಿದೆ ಕೊರೊನಾ ಲಸಿಕಾಕರಣ ವೇಗ

ಈ ಸುದ್ದಿಯನ್ನು ಶೇರ್ ಮಾಡಿ

ಆಹಮದಾಬಾದ್,ಜೂ.21- ಮುಂದಿನ ಜುಲೈ ಮತ್ತು ಆಗಷ್ಟ್ ತಿಂಗಳಿನಿಂದ ಕೊರೊನಾ ಲಸಿಕೆ ವೇಗ ಹೆಚ್ಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ತಿಳಿಸಿದ್ದಾರೆ.

ಅಹಮದಾಬಾದ್‍ನ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ನೀಡಲು ಸೂಚಿಸಿದ್ದಾರೆ. ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಮುಂದಿನ ತಿಂಗಳಿನಿಂದ ಲಸಿಕಾ ವಿತರಣೆ ವೇಗ ಪಡೆದುಕೊಳ್ಳಲಿದೆ ಎಂದು ಅವರು ಹೇಳಿದರು.

ಮೋದಿ ಅವರ ನೇತೃತ್ವದಲ್ಲಿ ಇಂದಿನಿಂದ ಕೊರೊನಾ ವಿರುದ್ಧದ ಹೋರಾಟದಲ್ಲಿ ನಿರ್ಣಾಯಕ ಪ್ರಯಾಣ ಶುರುವಾಗಿದೆ. ಅದಷ್ಟು ಶೀಘ್ರ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಗುರಿ ತಲುಪಲಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

Facebook Comments

Sri Raghav

Admin