ದೇಶದಲ್ಲಿ 2 ಕೋಟಿ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಮೇ.4-ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಎರಡು ಕೋಟಿ ಗಡಿ ದಾಟಿದೆ. ಆದರೆ, ಪ್ರತಿದಿನದ ಸೋಂಕು ಪ್ರಮಾಣ 3.52 ಲಕ್ಷಕ್ಕೆ ಇಳಿದಿರುವುದು ತುಸು ಸಮಾಧಾನ ತಂದಿದೆ.

ನಿನ್ನೆಯಿಂದಿಚೆಗೆ 3449 ಮಂದಿ ಮಹಾಮಾರಿಗೆ ಬಲಿಯಾಗಿದ್ದು ಇದುವರೆಗೂ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,22,408ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಬಹಿರಂಗಪಡಿಸಿದೆ.

ಕಳೆದ ಮೂರು ದಿನಗಳ ಹಿಂದೆ 4 ಲಕ್ಷದ ಗಡಿದಾಟಿದ್ದ ಸೋಂಕಿತರ ಸಂಖ್ಯೆ ನಿನ್ನೆಯಿಂದ ಇಳಿಮುಖವಾಗುತ್ತಿದೆ.ನಿನ್ನೆಯಿಂದ 3,52,229 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಇದರಿಂದಾಗಿ ದೇಶದ ಒಟ್ಟು ಸೋಂಕಿತರ ಸಂಖ್ಯೆ 2,02,82,833 ಕೋಟಿಗೆ ಏರಿಕೆಯಾಗಿದೆ.

ಕೊರೊನಾ ಚೇತರಿಕೆ ಪ್ರಮಾಣ ಶೇ. 81.91ಕ್ಕೆ ಕುಸಿದಿರುವುದರಿಂದ ಸಕ್ರಿಯ ಸೋಂಕು ಪ್ರಮಾಣ 34,47,133ಕ್ಕೆ ಏರಿಕೆಯಾಗಿದೆ. ಏರಡು ಕೋಟಿಗೂ ಅಧಿಕ ಮಂದಿಗೆ ಸೋಂಕು ಕಾಣಿಸಿಕೊಂಡಿದ್ದರೂ ಇದುವರೆಗೆ 1,66 ಕೋಟಿಗೂ ಹೆಚ್ಚು ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

Facebook Comments

Sri Raghav

Admin