ಹಾಸನದಲ್ಲಿ ಮತ್ತೊಂದು ಕೋವಿಡ್ ಕೇರ್ ಕೇಂದ್ರ ಪ್ರಾರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ,ಜು.16- ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಮತ್ತೊಂದು ಅತ್ಯಾಧುನಿಕ ಸೌಲಭ್ಯಗಳುಳ್ಳ ಕೋವಿಡ್ ಕೇರ್ ಸೆಂಟರ್ ಅನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಯಾವುದೇ ರೋಗಲಕ್ಷಣಗಳಿಲ್ಲದೆ ಇರುವ ಕೋವಿಡ್ ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡುವ ಸಲುವಾಗಿ ಧರ್ಮಸ್ಥಳ ಆಯುರ್ವೇದ ಕಾಲೇಜಿನಲ್ಲಿ ಪ್ರತ್ಯೇಕಿತ ಕಟ್ಟಡವೊಂದರಲ್ಲಿ ಸುಮಾರು 300 ಹಾಸಿಗೆಯುಳ್ಳ ಕೋವಿಡ್ ಕೇರ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ.

ಪ್ರತ್ಯೇಕ ಕೊಠಡಿಗಳು ವ್ಯವಸ್ಥಿತ ನೈಜ ಶೌಚಾಲಯಗಳು ವೈದ್ಯರ ವಿಶ್ರಾಂತಿ ಕೊಠಡಿ, ಧ್ವನಿ ವರ್ಧಕ ವ್ಯವಸ್ಥೆ ಈ ಕಟ್ಟಡದಲ್ಲಿ ಲಭ್ಯವಿದೆ. ಧರ್ಮಸ್ಥಳ ಆಯುರ್ವೇದ ಕಾಲೇಜು ಸಂಸ್ಥೆ ತನ್ನ ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲïನ್ನು ಈ ಸೌಲಭ್ಯಕ್ಕಾಗಿ ಜಿಲ್ಲಾಡಳಿತಕ್ಕೆ ಬಿಟ್ಟುಕೊಟ್ಟಿದೆ.
ಜಿಲ್ಲೆಯ ಶ್ರೀ ಧರ್ಮಸ್ಥಳ ವೈದ್ಯಕೀಯ ಆಸ್ಪತ್ರೆಯಲ್ಲಿ ಹೊಸದಾಗಿ ಸ್ಥಾಪಿಸಿರುವ ಕೋವಿಡ್-19 ಕೇರ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ಕೋವಿಡ್-19 ಸೋಂಕಿತರಿಗಾಗಿ ಮಾಡಿರುವ ಪ್ರತೇಕ ಕೊಠಡಿಗಳು, ವೈದ್ಯಕೀಯ ಸಿಬ್ಬಂಧಿಗಳಿಗಾಗಿ ಮiÁಡಿರುವ ಪ್ರತ್ಯೇಕ ಕೊಠಡಿಗಳು, ಶೌಚಾಲಯದ ವ್ಯವಸ್ಥೆ, ಊಟೋಪಚಾರದ ವ್ಯವಸ್ಥೆ ಹಾಗೂ ಬೆಡ್‍ಗಳ ವ್ಯವಸ್ಥೆ ಕುರಿತು ಪಡೆದು ಸಲಹೆ ಸೂಚನೆಗಳನ್ನು ನೀಡಿದರು.

ಜೆಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಜಯï ಕುಮಾರ್, ಶ್ರೀ ಧರ್ಮಸ್ಥಳ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಸನ್ನ ನರಸಿಂಹ ರಾವ್, ವೈದ್ಯಕೀಯ ಅಧೀಕ್ಷಕ ಡಾ.ಮುರುಳೀಧರ್ ಪೂಜಾರ್, ನೋಡಲï ಆಫೀಸರ್, ಡಾ.ಶಿವಶಂಕರ್, ಸಿ.ಸಿ.ಸಿ ನೋಡಲï ಆಫೀಸರ್ ಡಾ.ಉಜ್ವಲï ಗುಪ್ತ, ಡಾ.ಆದರ್ಶ, ಡಾ.ರಮೇಶ್‍ಮತ್ತಿತರರು ಹಾಜರಿದ್ದರು.

ಪ್ರಸ್ತುತ ಸನ್ನಿವೇಶವನ್ನು ಅವಲೋಕಿಸಿದ ಅವರು ಈ ಹೆಚ್ಚುವರಿ 300 ಬೆಡ್‍ಗಳ ಆಸ್ಪತ್ರೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಸಾಕಾಗಬಹುದಾಗಿದೆ ಎಂಬ ವಾಸ್ತವವನ್ನು ಅವರು ವ್ಯಕ್ತಪಡಿಸಿರು.

ಈ ಆಸ್ಪತ್ರೆಗೆ ಅಗತ್ಯವಿರುವ ಸೌಲಭ್ಯ ಹಾಗೂ ತಜ್ಞವೈದ್ಯರ ಸೇವೆ ಬಗ್ಗೆ ಪ್ರಸ್ಥಾವನೆ ಸಲ್ಲಿಸುವಂತೆ ಅವರು ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಶ್ರೀ ಧರ್ಮಸ್ಥಳ ಕಾಲೇಜಿನ ಪ್ರಾಂಶುಪಾಲರು ಹಾಗೂ ವೈದ್ಯಕೀಯ ಅಧೀಕ್ಷಕರೊಂದಿಗೆ ಮಾತನಾಡಿ, ಅಲ್ಲಿನ ಆಸ್ಪತ್ರೆಯ ಸಿಬ್ಬಂಧಿಗಳನ್ನು ಕೋವಿಡ್-19 ತಡೆಗಟ್ಟುವಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದರಲ್ಲದೇ, ಜಿಲ್ಲಾಡಳಿತಕ್ಕೆ ನೀಡುತ್ತಿರುವ ಸಹಕಾರಕ್ಕೆ ಧನ್ಯವಾದಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ , ಕೊರೋನಾ ಸೋಂಕಿನ ಯಾವುದೇ ರೋಗಲಕ್ಷಣಗಳು ಕಂಡುಬರದ ಸೋಂಕಿತರಿಗಾಗಿ ಈ ಕೋವಿಡ್-19 ಚಿಕಿತ್ಸಾ ಕೇಂದ್ರವನ್ನು ಮಾಡಲಾಗಿದೆ.

ಈ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಗುಣಮುಖರಾದವರನ್ನು ಮನೆಗೆ ಕಳುಹಿಸಲಾಗುತ್ತದೆ. ಪರಿಸ್ಥಿತಿ ವಿಷಮವಾದಲ್ಲಿ ಅಂತಹವರನ್ನು ಹಿಮ್ಸï ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ನಿಗಾವಹಿಸಲಾಗುತ್ತದೆ ಎಂದರು.

ಕೋವಿಡ್ ಸೋಂಕಿತರಿಗಾಗಿ ಪ್ರತ್ಯೇಕ ಕೊಠಡಿಗಳನ್ನು ಮಾಡಲಾಗಿದ್ದು, ಒಂದು ಕೊಠಡಿಯಲ್ಲಿ ಇಬ್ಬರಿಂದ ಮೂವರು ಚಿಕಿತ್ಸೆ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರಲ್ಲದೆ, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯಿಂದ ವೈದ್ಯರ ವ್ಯವಸ್ಥೆ ಮಾಡಲಾಗಿದೆ. ಶ್ರೀ ಧರ್ಮಸ್ಥಳ ಆರೋಗ್ಯ ಸಂಸ್ಥೆಯ ಸಿಬ್ಬಂಧಿಗಳು ಕೋವಿಡ್-19 ತಡೆಗಟ್ಟುವಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸುಮಾರು 300 ಜನ ಸೋಂಕಿತರನ್ನು ಈ ಆಸ್ಪತ್ರೆಗೆ ವರ್ಗಾಯಿಸಲು ಅವಕಾಶವಿದೆ ಎಲ್ಲರಿಗೂ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ ಹಾಗೂ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ಹೇಳಿದರು.

Facebook Comments

Sri Raghav

Admin