ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ವ್ಯಕ್ತಿ ಬಂಧನ, 2.51 ಲಕ್ಷ ರೂ. ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.20- ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 2.51 ಲಕ್ಷ ರೂ. ನಗದು ಮತ್ತು ಮೊಬೈಲ್‍ನ್ನು ವಶಪಡಿಸಿಕೊಂಡಿದ್ದಾರೆ.

ಆನಂದ್(30) ಬಂತ ಆರೋಪಿ. ಈತ ಆಸ್ಟ್ರೇಲಿಯಾ ದೇಶದಲ್ಲಿ ನಿನ್ನೆ ನಡೆದ ಇಂಡಿಯಾ ಮತ್ತು ಆಸ್ಟ್ರೇಲಿಯ ತಂಡದ ನಡುವಿನ ಟೆಸ್ಟ್ ಕ್ರಿಕೆಟ್‍ಗೆ ಸಂಬಂಸಿದಂತೆ ತಂಡಗಳ ಸೋಲು-ಗೆಲುವಿನ ಬಗ್ಗೆ ಸಾರ್ವಜನಿಕರಿಂದ ಲೋಟಸ್ ಡಾಟ್‍ಕಾಮ್ ಮೊಬೈಲ್ ಫೋನ್ ಆ್ಯಪ್ ಮೂಲಕ ಬೆಟ್ಟಿಂಗ್ ರೇಷ್ಯೂ ನೋಡಿಕೊಂಡು ಜೂಜಾಡುತ್ತಿದ್ದನು.

ಈ ಹಿಂದೆ ನಡೆದ ಕ್ರಿಕೆಟ್ ಪಂದ್ಯಗಳು ಹಾಗೂ ಈ ಪಂದ್ಯದಲ್ಲಿ ಗೆದ್ದವರಿಗೆ ಹಣ ಕೊಡಲು ಮತ್ತು ಸೋತವರಿಂದ ಹಣಪಡೆಯಲು ನಾಗರಬಾವಿ ಮುಖ್ಯರಸ್ತೆಯ ಭೈರವೇಶ್ವರ ನಗರಕ್ಕೆ ಆರೋಪಿ ಬರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸ್ಥಳಕ್ಕೆ ತೆರಳಿ ಈತನನ್ನು ಬಂಸಿದ್ದಾರೆ. ಆರೋಪಿ ವಿರುದ್ಧ ಚಂದ್ರಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪಪೊಲೀಸ್ ಆಯುಕ್ತ ರವಿಕುಮಾರ್ ಅವರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಹನುಮಂತ ರಾಯ ಅವರ ನೇತೃತ್ವದಲ್ಲಿ ಇನ್‍ಸ್ಪೆಕ್ಟರ್ ಹಾಗೂ ಸಿಬ್ಬಂದಿ ಈ ಕಾರ್ಯಚರಣೆ ನಡೆಸಿದ್ದಾರೆ.

Facebook Comments

Sri Raghav

Admin