ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ, 6 ಮಂದಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.23-ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಆರು ಮಂದಿಯನ್ನು ಬಂಧಿಸಿ 6 ಲಕ್ಷ ನಗದು, ಕಾರ್,ಬೈಕ್ ಮತ್ತು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ದೂರದ ದುಬೈನಲ್ಲಿ ಐಪಿಎಲ್ ಕ್ರಿಕೆಟ್ ಟೂರ್ನಿ ಆರಂಭವಾಗುತ್ತಿದ್ದಂತೆ ನಗರದಲ್ಲಿ ಬೆಟ್ಟಿಂಗ್ ದಂಧೆ ತೀವ್ರಗೊಂಡಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಎರಡು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ.

ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿ 5 ಮಂದಿಯನ್ನು ಬಂಧಿಸಿ 1.70ಲಕ್ಷ ನಗದು, ಕಾರ್, ಬೈಕ್ ಮತ್ತು ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಗಜೇಂದ್ರ, ಮಣಿಕಂಠ, ಅರುಣ್‍ಕುಮಾರ್, ವರುಣ್‍ಕುಮಾರ್ ಹಾಗೂ ಜೋಸೆಫ್ ಬಂಧಿತ ಆರೋಪಿಗಳು.

ಮತ್ತೊಂದು ಪ್ರಕರಣದಲ್ಲಿ ಮಲ್ಲೇಶ್ವರಂ ಫೋಲಿಸ್ ಠಾಣಾ ವ್ಯಾಪ್ತಿಯ ಅಡ್ಡೆ ಮೇಲೆ ದಾಳಿ ನಡೆಸಿ ವಿನಯ್ ಎಂಬಾತನನ್ನು ಬಂಧಿಸಿ 4 ಲಕ್ಷ ನಗದು, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಮೊನ್ನೆ ದುಬೈನಲ್ಲಿ ಆರ್‍ಸಿಬಿ ಮತ್ತು ಹೈದ್ರಾಬಾದ್ ತಂಡಗಳ ನಡುವೆ ಹಾಗೂ ನಿನ್ನೆ ಚೆನ್ನೈ ಮತ್ತು ರಾಜಸ್ಥಾನ ತಂಡಗಳ ನಡುವೆ ನಡೆದ ಐಪಿಎಲ್ ಪಂದ್ಯಗಳ ಮೇಲೆ ಮೊಬೈಲ್ ಮೂಲಕ ಬೆಟ್ಟಿಂಗ್ ನಡೆಸಲಾಗಿತ್ತು ಎಂಬ ಮಾಹಿತಿ ಮೇರೆಗೆ ಸಿಸಿಬಿ ಎಸಿಪಿ ಹನುಮಂತರಾಯ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.

Facebook Comments