ಪ್ರವಾಹದ ನೀರಿನಲ್ಲಿ ಮೊಸಳೆಗಳು ಪ್ರತ್ಯಕ್ಷ..!

ಈ ಸುದ್ದಿಯನ್ನು ಶೇರ್ ಮಾಡಿ

ಪೂನಾ,ಜು.28-ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಮಳೆ ನೀರಿನಲ್ಲಿ ಮೊಸಳೆಗಳು ಪ್ರತ್ಯಕ್ಷವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಿನ್ನೆಯಿಂದ ಸಾಂಗ್ಲಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕೆಲ ಬಡಾವಣೆಗಳಲ್ಲಿ ಉಕ್ಕಿ ಹರಿಯುತ್ತಿರುವ ನೀರಿನಲ್ಲಿ ಮೊಸಳೆಗಳು ಕಾಣಿಸಿಕೊಂಡಿವೆ.

ತಕ್ಷಣ ಎಚ್ಚೆತ್ತುಕೊಂಡಿರುವ ಆರಣ್ಯ ಇಲಾಖೆಯವರು ಮೊಸಳೆಗಳು ಮನುಷ್ಯರ ಮೇಲೆ ದಾಳಿ ನಡೆಸುವುದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಕೃಷ್ಣ ನದಿ ನೀರು ಉಕ್ಕಿ ಹರಿಯುತ್ತಿರುವುದರಿಂದ ರಸ್ತೆಗಳೆಲ್ಲಾ ಮೋರಿಗಳಾಂತಾಗಿದ್ದು, ರಸ್ತೆಗಳು, ಕೆಲ ಮನೆಗಳ ತಾರಸಿ ಮೇಲೆ ಮೊಸಳೆಗಳು ಕಾಣಿಸಿಕೊಂಡಿವೆ.

ನದಿ ತೀರದ ಪ್ರದೇಶಗಳಾದ ಬಿಲ್ವಾಡಿ, ಮಲ್ವಾಡಿ, ದಿಗ್ರಜ್, ಚೋಪಡೆವಾಡಿ, ಮತ್ತಿತರ ಪ್ರದೇಶಗಳಲ್ಲಿ ಮೊಸಳೆಗಳಿಂದ ಆಗುವ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯಾಧಿಕಾರಿ ವಿಜಯ್ ಮಾನೆ ತಿಳಿಸಿದ್ದಾರೆ.

Facebook Comments