ರಾಜ್ಯದ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.10- ಮಡಿಕೇರಿ, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಗದಗ, ಧಾರವಾಡ, ಬೆಳಗಾವಿ, ರಾಯಚೂರು, ಬಿಜಾಪುರ, ಬಾಗಲಕೋಟೆ ಸೇರಿದಂತೆ ಮತ್ತಿತರ ಕಡೆ ಕಳೆದ ಒಂದು ವಾರಕ್ಕಿಂತ ಹೆಚ್ಚು ಕಾಲ ಸುರಿದ ಮಳೆಗೆ 80 ಸಾವಿರಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಆಗಿರುವುದನ್ನು ಪ್ರಧಾನಿಗಳ ಗಮನಕ್ಕೆ ತಂದಿರುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಪ್ರಧಾನಿ ನರೇಂದ್ರಮೋದಿ ಅವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅನುಪಸ್ಥಿತಿಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ಮತ್ತಿತರ ಅಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನಡೆಸಲಾಯಿತು.

ವಿಡಿಯೋ ಕಾನರೆನ್ಸ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಜಿಲ್ಲಾಕಾರಿಗಳು ನೀಡಿರುವ ವರದಿಯಲ್ಲಿ ಪ್ರಾಥಮಿಕ ಅಂದಾಜಿನ ಪ್ರಕಾರ 80 ಸಾವಿರ ಹೆಕ್ಟೇರ್‍ಗೂ ಹೆಚ್ಚು ಪ್ರದೇಶಗಳಲ್ಲಿ ತೋಟಗಾರಿಕೆ ಮತ್ತು ವಾಣಿಜ್ಯ ಬೆಳೆಗಳು ನಾಶವಾಗಿವೆ.

ಈವರೆಗೂ 3,500 ಕಿ.ಮೀ ರಸ್ತೆ ನಾಶವಾಗಿದೆ. 393 ಕಟ್ಟಡಗಳು, 250 ಸೇತುವೆಗಳು, 104 ಎಂಐ ಟ್ಯಾಂಕ್‍ಗಳು ಕುಸಿದು ಬಿದ್ದಿವೆ ಎಂದು ವಿವರಣೆ ನೀಡಿದರು.

ರಾಜ್ಯದ ಒಟ್ಟು 56 ತಾಲ್ಲೂಕುಗಳಲ್ಲಿ ಪ್ರವಾಹ ಉಂಟಾಗಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ 4000 ನಷ್ಟ ಉಂಟಾಗಿರಬಹುದು. ಗುಡ್ಡ ಕುಸಿತ, ಕಡಲಕೊರೆತ, ವಿದ್ಯುತ್ ಕಂಬಗಳು ಉರುಳಿ ಬಿದ್ದಿರುವುದು, ಟ್ರಾನ್ಸ್‍ಫರ್ಮರ್‍ಗಳು ಹಾಳಾಗಿವೆ. 885 ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ನೆರೆ ಬಂದಿದೆ ಎಂದು ವಿವರ ನೀಡಿದರು.

ಕಳೆದ ವರ್ಷದ ಜೂನ್-ಜುಲೈ ತಿಂಗಳಿಗೆ ಹೋಲಿಸಿದರೆ ಈ ಬಾರಿ ಧಾರವಾಡ, ಗದಗ, ಬೆಳಗಾವಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಅದರಲ್ಲೂ ಮಡಿಕೇರಿಯಲ್ಲಿ ಶೇ.500ರಷ್ಟು ಮಳೆಯಾಗಿದೆ ಎಂದು ಬೊಮ್ಮಾಯಿ ಅಂಕಿಅಂಶಗಳ ಮಾಹಿತಿಯನ್ನು ಒದಗಿಸಿದರು.

ರಾಜ್ಯದಲ್ಲಿ 1774 ಪುರ್ನವಸತಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅಗತ್ಯವಿರುವ ಕಡೆ ಗಂಜಿ ಕೇಂದ್ರಗಳನ್ನು ತೆರೆಯುವಂತೆ ಜಿಲ್ಲಾಕಾರಿಗಳಿಗೆ ಸೂಚಿಸಲಾಗಿದೆ. ಈಗಿನ ಮಾಹಿತಿ ಪ್ರಕಾರ 3000 ಮನೆಗಳು ಕುಸಿದಿವೆ.

ನೆರೆಯಲ್ಲಿ ಪ್ರಾಣ ಹಾನಿ ಸಂಭವಿಸಿದರೆ 5 ಲಕ್ಷ, ಸಂಪೂರ್ಣ ಮನೆ ಕುಸಿದು ಬಿದ್ದರೆ ಶೇ .75ರಷ್ಟು ಮನೆ ಕುಸಿದು ಬಿದ್ದಿದ್ದರೆ 5 ಲಕ್ಷ, ಭಾಗಶಃ ಕುಸಿದಿದ್ದರೆ 3 ಲಕ್ಷ, ಪಾತ್ರೆಗಳು, ದಿನಬಳಕೆಯ ವಸ್ತುಗಳು ನಾಶವಾಗಿದ್ದರೆ 10 ಸಾವಿರ ಪರಿಹಾರವನ್ನು ನೀಡುತ್ತಿದ್ದೇವೆ.

ದೇಶದ ಯಾವುದೇ ರಾಜ್ಯಗಳಲ್ಲೂ ಇಷ್ಟು ದೊಡ್ಡ ಮಟ್ಟದ ಪರಿಹಾರವನ್ನು ನೀಡುತ್ತಿಲ್ಲ ಎಂದು ಬೊಮ್ಮಾಯಿ ಸಮರ್ಥಿಸಿಕೊಂಡರು. ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಭಾರತೀಯ ವಾಯುಪಡೆಗೆ ಸೇರಿದ ನಾಲ್ಕು ಹೆಲಿಕಾಪ್ಟರ್‍ಗಳನ್ನುಮೀಸಲಿಡಲಾಗಿದೆ. ಅಲ್ಲದೆ ಅಗತ್ಯವಿರುವ ಕಡೆ ಇವುಗಳನ್ನು ಬಳಸಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ಕೊಡಲಾಗಿದೆ.

ಒಂದು ತಿಂಗಳು ಮುಂಚಿತವಾಗಿಯೇ ರಾಜ್ಯಕ್ಕೆ ಎನ್‍ಡಿಆರ್‍ಎಫ್ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿಸಿದೆ. ಸರ್ಕಾರದ ಮನವಿ ಮೇರೆಗೆ ಸೇನಾಪಡೆಯು ಆಗಮಿಸಿದೆ. ಅಗತ್ಯವಿರುವ ಕಡೆ ಇವರನ್ನು ನಿಯೋಜನೆ ಮಾಡಿಕೊಳ್ಳುವಂತೆ ಜಿಲ್ಲಾಕಾರಿಗಳಿಗೆ ಸೂಚಿಸಿದ್ದೇವೆ.

ರಕ್ಷಣಾ ಕಾರ್ಯ ಚುರುಕುಗೊಂಡಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಪ್ರತಿ ಗಂಟೆಗೊಮ್ಮೆ ಇಂಚಿಂಚು ಮಾಹಿತಿ ಪಡೆಯುತ್ತಿದ್ದಾರೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಮುಖ್ಯಮಂತ್ರಿ ಅವರು ಸೂಚನೆ ಕೊಟ್ಟಿದ್ದಾರೆ. ಸರ್ಕಾರ ಸಮಾರೋಪಾದಿಯಲ್ಲಿ ಪರಿಹಾರವನ್ನು ಕೈಗೊಂಡಿದೆ. ನದಿಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಜಿಲ್ಲಾಡಳಿತ ನೀಡುವ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಸಲಹೆ ಮಾಡಿದರು.

Facebook Comments

Sri Raghav

Admin