ಸಿಆರ್‌ಪಿಎಫ್‌ ವಾಹನದ ಮೇಲೆ ಉಗ್ರರ ದಾಳಿ, ಯೋಧರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ,ಜೂ.26- ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಭಯೋತ್ಪಾದಕರ ಉಪಟಳ ಮುಂದುವರೆದಿದ್ದು, ಇಂದು ಮಧ್ಯಾಹ್ನ ಅನಂತನಾಗ್ ಜಿಲ್ಲೆಯಲ್ಲಿ ಸಿಆರ್‌ಪಿಎಫ್‌ ವಾಹನದ ಮೇಲೆ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ ಕೆಲ ಯೋಧರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಅನಂತನಾಗ್ ಜಿಲ್ಲೆಯ ಬಿಜ್‍ಬೆಹರಾ ಪ್ರದೇಶದ ಸೇತುವೆ ಬಳಿ ಸಿಆರ್‍ಪಿಎಫ್‍ನ 90ನೇ ಬೆಟಾಲಿಯನ್ ಯೋಧರು ವಾಹನದಲ್ಲಿ ತೆರಳುತ್ತಿದ್ದಾಗ ಮರೆಯಲ್ಲಿ ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದರು.

ಈ ಘಟನೆಯಲ್ಲಿ ಕೆಲ ಯೋಧರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಉಗ್ರಗಾಮಿಗಳು ದಾಳಿ ನಡೆಸುತ್ತಿದ್ದಂತೆ ಎಚ್ಚೆತ್ತುಕೊಂಡ ಸಿಆರ್‍ಪಿಎಫ್ ಯೋಧರು ಗುಂಡು ಹಾರಿಸಿದಾಗ ಭಯೋತ್ಪಾದಕರು ಅಲ್ಲಿಂದ ಪರಾರಿಯಾದರು. ಆತಂಕವಾದಿಗಳಿಗಾಗಿ ತೀವ್ರ ಶೋಧ ಮುಂದುವರೆದಿದೆ.

ಮತ್ತಿಬ್ಬರು ಉಗ್ರರ ಹತ್ಯೆ: ಪುಲ್ವಾಮ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಎನ್‍ಕೌಂಟರ್‍ನಲ್ಲಿ ಭಾರತೀಯ ಭದ್ರತಾ ಪಡೆಗಳು ಇಬ್ಬರು ಉಗ್ರಗಾಮಿಗಳನ್ನು ಹೊಡೆದುರುಳಿಸಿದ್ದಾರೆ.
ಹತರಾದ ಉಗ್ರರಿಂದ ಅಪಾರ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

Facebook Comments