CSK ಕ್ಯಾಪ್ಟನ್ ಧೋನಿಗೆ 12 ಲಕ್ಷ ರೂ.ದಂಡ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ,ಏ.11-ದೆಹಲಿ ಕ್ಯಾಪಿಟಲ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕೆ ಚೆನ್ನೈ ಸೂಪರ್ ಕಿಂಗ್‍ನ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ 12 ಲಕ್ಷ ರೂ.ದಂಡ ವಿಧಿಸಲಾಗಿದೆ.ಮೂರು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಸಿಎಸ್‍ಕೆ ತಂಡ ನಿನ್ನೆ ನಡೆದ ದೆಹಲಿ ವಿರುದ್ಧದ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿತ್ತು.

ಪಂದ್ಯ ಕೈ ತಪ್ಪುತ್ತಿದ್ದ ಸಂದರ್ಭದಲ್ಲಿ ಸಿಎಸ್‍ಕೆ ತಂಡದವರು ನಿಧಾನಗತಿಯ ಬೌಲಿಂಗ್ ನಡೆಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ 12 ಲಕ್ಷ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

Facebook Comments

Sri Raghav

Admin