ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೋ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು : ಸಿ.ಟಿ.ರವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.1-ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೋ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ.ರವಿ ಆಕಾಂಕ್ಷಿಗಳಿಗೆ ಟಾಂಗ್ ಕೊಟ್ಟಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ನಿಷ್ಠೆಗೆ ಎಲ್ಲರೂ ಬದ್ದರಾಗಲೇಬೇಕು. ಪಕ್ಷವು ಏನು ತೀರ್ಮಾನ ಕೈಗೊಳ್ಳುತ್ತದೋ ಅದನ್ನು ಒಪ್ಪಿಕೊಳ್ಳಲೇಬೇಕು.

ಸ್ವಹಿತಾಸಕ್ತಿಗಳಿಗಿಂತ ಪಕ್ಷದ ಹಿತಾಸಕ್ತಿಯೇ ಮುಖ್ಯ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದು ಲಾಬಿ ನಡೆಸುತ್ತಿರುವವರಿಗೆ ಸೂಚ್ಯವಾಗಿ ಬಿಸಿ ಮುಟ್ಟಿಸಿದರು. ಮೂವರು ಉಪಮುಖ್ಯಮಂತ್ರಿಗಳು ಮುಂದುವರೆಯುತ್ತಾರೆ ಎಂಬ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ ಏನು ನಿರ್ಧಾರ ಕೈಗೊಂಡಿದೆ ಎಂಬುದು ನಮಗೆ ಗೊತ್ತಿಲ್ಲ. ಆದರೆ ಪಕ್ಷ ನಿಷ್ಠೆಗೆ ಎಲ್ಲರೂ ಬದ್ದರಾಗಲೇಬೇಕೆಂದು ಪುನರುಚ್ಚರಿಸಿದರು.

ಯೋಗ ಇದ್ದವರಿಗೆ ಯೋಗ ಒಲಿಯುತ್ತದೆ. ಮುಖ್ಯಮಂತ್ರಿಗಳು ಹೈಕಮಾಂಡ್ ಜೊತೆ ಚರ್ಚೆ ಮಾಡಿದ್ದಾರೆ. ಅವರು ಯಾವ ರೀತಿ ಸಲಹೆ ಕೊಟ್ಟಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ಸೋಮವಾರ ಅಥವಾ ಮಂಗಳವಾರ ಸಂಪುಟ ವಿಸ್ತರಣೆ ಎಂಬ ಸುಳಿವು ನೀಡಿದ್ದಾರೆ.

ಇಂದು ಸಂಜೆಯೊಳಗೆ ಎಲ್ಲವೂ ಇತ್ಯರ್ಥವಾಗುವ ಸಂಭವವಿದೆ. ಸಂಪುಟ ವಿಸ್ತರಣೆಯೋ, ಪುನಾರಚನೆಯೋ ನನಗೆ ತಿಳಿಯದು. ಒಂದು ವೇಳೆ ನನ್ನ ಖಾತೆಯನ್ನು ಬದಲಾಯಿಸಿ ಬೇರೊಂದು ಖಾತೆ ನೀಡಿದರೂ ಅದನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆಂದು ಹೇಳಿದರು.

ಹಿಂದೆಯೂ ನನಗೆ ಇಂಥದ್ದೇ ಖಾತೆ ಕೊಡಿ ಎಂದು ಕೇಳಿರಲಿಲ್ಲ. ಮುಂದೆಯೂ ಕೇಳುವುದಿಲ್ಲ. ಯಾವುದೇ ಜವಾಬ್ದಾರಿ ವಹಿಸಿದರೂ ನಿಷ್ಠೆಯಿಂದ ನಿಭಾಯಿಸುತ್ತೇನೆ. ಈಗಲೂ ನನ್ನ ಮೇಲೆ ನಂಬಿಕೆ ಇಟ್ಟು ಖಾತೆ ಬದಲಾವಣೆ ಮಾಡಿದರೆ ಅದನ್ನೂ ನಿಭಾಯಿಸುತ್ತೇನೆ ಎಂದರು.

Facebook Comments