ಮೇ ಅಂತ್ಯದೊಳಗೆ ಕಾಮಗಾರಿ ಪೂರ್ಣ : ಸಿ.ಟಿ.ರವಿ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು,ಫೆ.10- ನಗರದಲ್ಲಿ ನಡೆಯುತ್ತಿರುವ ಅಮೃತ್ ಕುಡಿಯುವ ನೀರು ಯೋಜನೆ ಹಾಗೂ ಒಳಚರಂಡಿ ಕಾಮಗಾರಿಯನ್ನು ಮೇ ತಿಂಗಳ ಅಂತ್ಯದೊಳಗೆ ಸಂಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು.

ಉಂಡೆದಾಸರಹಳ್ಳಿ ರಸ್ತೆ ಡಾಂಬರೀಕರಣ ಕಾಮಗಾರಿ ಚಾಲನೆ ನೀಡಿ ಮಾತನಾಡಿದ ಅವರು ನಗರದ ಕೆ. ಎಂ. ರಸ್ತೆಯಿಂದ ಕ್ಯಾಥೋಲಿಕ್ ಕ್ಲಬ್ ರಸ್ತೆ ಕಾಮಗಾರಿ ನಡೆಯಲಿದ್ದು, ನಗರದಲ್ಲಿ ನಡೆಯುತ್ತಿರುವ ಅಮೃತ್ ಯೋಜನೆ ಕಾಮಗಾರಿ ಏಪ್ರಿಲ್ ಅಂತ್ಯದೊಳಗೆ ಹಾಗೂ ಯುಜಿಡಿ ಕಾಮಗಾರಿ ಮೇ ತಿಂಗಳ ವೇಳೆಗೆ ಪೂರ್ಣಗೊಳ್ಳಲಿದೆ ಎಂದರು.  ಕಾಮಗಾರಿಯನ್ನು ಕರ್ನಾಟಕ ಒಳಚರಂಡಿ ಮತ್ತು ನೀರು ಸರಬರಾಜು ಪೂರೈಕೆ ಇಲಾಖೆ ಪೂರ್ಣಗೊಳಿಸಲು ಡಿಪಿಆರ್ ತಯಾರಿಸಲಾಗಿದೆ ಎಂದು ಹೇಳಿದರು.

ವೈದ್ಯಕೀಯ ಮಹಾವಿದ್ಯಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು ಜಿಲ್ಲಾ ಉತ್ಸವದ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದ ಶಂಕುಸ್ಥಾಪನೆ ಮಾಡಿಸುವ ಉದ್ದೇಶವಿದೆ ಎಂದು ಅವರು ತಿಳಿಸಿದರು. ನಗರಸಭೆ ಮಾಜಿ ಅಧ್ಯಕ್ಷ ದೇವರಾಜ್ ಶೆಟ್ಟಿ, ಕೋಟೆ ರಂಗನಾಥ್ ಮೊದಲಾದವರಿದ್ದರು.

Facebook Comments