ಸಂಸ್ಕೃತಿಯ ಬೇರುಗಳನ್ನು ಗಟ್ಟಿಗೊಳಿಸುವ ಪ್ರಯತ್ನವೇ ಚಿಕ್ಕಮಗಳೂರು ಹಬ್ಬ : ಸಚಿವ ಸಿ.ಟಿ. ರವಿ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು, ಫೆ.12-ಸಾಂಸ್ಕøತಿಕ ಲೋಕಕ್ಕೆ ಹೊಸ ಆಯಾಮವನ್ನು ನೀಡಲು, ಕಲೆಯನ್ನು ಸಾಂಸ್ಕøತಿಕ ನೆಲೆಗಟ್ಟಿನಲ್ಲಿ ನೋಡಿ ಸಂಸ್ಕøತಿಯ ಬೇರುಗಳನ್ನು ಗಟ್ಟಿಗೊಳಿಸುವ ಪ್ರಯತ್ನವೇ ಚಿಕ್ಕಮಗಳೂರು ಹಬ್ಬ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಚಿಕ್ಕಮಗಳೂರು ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅತಿವೃಷ್ಠಿಯಿಂದ ಹಾನಿಗೊಳಗಾಗಿರುವ ಸಂತ್ರಸ್ತರಿಗೆ ನೀಡುವ ಪರಿಹಾರವನ್ನು ಅವರ ಅಭಿವೃದ್ಧಿಗೆ ಮೀಸಲಿಡಲಾಗಿದೆ ಎಂದ ಅವರು ಅಭಿವೃದ್ಧಿ ಕಾರ್ಯಗಳ ಅನುದಾನವನ್ನು ಜಿಲ್ಲಾ ಉತ್ಸವಕ್ಕೆ ಬಳಸದೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಮೀಸಲಿಟ್ಟಿರುವ ಅನುದಾನವನ್ನು ಮಾತ್ರ ಬಳಸಿಕೊಳ್ಳಲಾಗುತ್ತಿದೆ ಎಂದರು.

ಜಿಲ್ಲಾ ಉತ್ಸವದಲ್ಲಿ ಜಿಲ್ಲೆಯ ಮತ್ತು ರಾಜ್ಯದ ವಿವಿಧ ಭಾಗಗಳ 3500 ಕಲಾವಿದರು ವಿವಿಧ ವೇಷಭೂಷಣ ತೊಟ್ಟು ಭಾಗವಹಿಸುತ್ತಿದ್ದು, ಅವರಿಗೆ ಅಗತ್ಯವಿರುವ ವಸತಿ ಮತ್ತು ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದರು. ಫೆ.28 ರಂದು ಜಿಲ್ಲಾ ಉತ್ಸವದ ಮೆರವಣಿಗೆಯ ನಂತರ ಸಂಜೆ 5.30 ಗಂಟೆಗೆ ಉದ್ಘಾಟನೆ ನಡೆಯಲಿದ್ದು, ಒಳಾಂಗಣ ವೇದಿಕೆಯಲ್ಲಿ ನಡೆಯುವ ನಾಟಕೋತ್ಸವ, ನೃತ್ಯೋತ್ಸವ, ಸುಗಮ ಸಂಗೀತದಂತಹ ಕಾರ್ಯಕ್ರಮಗಳು ನಗರದ ಕುವೆಂಪು ಕಲಾಮಂದಿರದಲ್ಲಿ ನಡೆಯಲಿವೆ ಎಂದು ತಿಳಿಸಿದರು.

ನಗರದ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಸಂಜೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು, ಬೋಳರಾಮೇಶ್ವರ ದೇವಸ್ಥಾನ ಹಾಗೂ ಜಿಲ್ಲಾ ಆಟದ ಮೈದಾನದ ಹಿಂಬದಿಯ ರಸ್ತೆಯಲ್ಲಿ ಆಹಾರ ಮೇಳ ಹಾಗೂ ವಸ್ತು ಪ್ರದರ್ಶನದ ಮಳಿಗೆಗಳನ್ನು ಹಾಕಲಾಗುತ್ತದೆ ಎಂದರು.

ಶಾಸಕರಾದ ಟಿ.ಡಿ. ರಾಜೇಗೌಡ, ಎಂ.ಕೆ. ಪ್ರಾಣೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ಉಪಾಧ್ಯಕ್ಷ ವಿಜಯಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮï, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಪೂವಿತಾ, ಅಪರ ಜಿಲ್ಲಾಧಿಕಾರಿ ಡಾ. ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Facebook Comments