“ವಾಣಿಜ್ಯ ನಗರಿ ಹುಬ್ಬಳ್ಳಿ ಉಗ್ರರ ಅಡಗುದಾಣವಾಗಿದೆ”

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ,ಅ.23- ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದ ಸ್ಫೋಟ ಪ್ರಕರಣ ವಾಣಿಜ್ಯ ನಗರದಲ್ಲಿ ಸ್ಲೀಪರ್ ಸೆಲ್‍ಗಳು ಇದ್ದಾರೆ ಎನ್ನುವುದಕ್ಕೆ ಸಾಕ್ಷಿ ಒದಗಿಸಿದೆ ಎಂದು ಸಚಿವ ಸಿ.ಟಿ. ರವಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಈ ಹಿಂದಿನಿಂದಲೂ ಭಯೋತ್ಪಾದಕರ ಅಡಗುತಾಣಗಳಾಗಿ ಅವರ ಕಾರ್ಯಚಟುವಟಿಕೆಗಳಿಗೆ ನೆಲೆಯಾಗಿದೆ.

ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಲಿದೆ ಎಂದರು. ತಿವಾರಿ ಹತ್ಯೆ ಪ್ರಕರಣ ಸಂಬಂಧ ಮಹ್ಮದ್ ಸಾದಿಕ್ ಎಂಬ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಅವನನ್ನು ಸಂಪೂರ್ಣವಾಗಿ ವಿಚಾರಣೆಗೊಳಪಡಿಸಬೇಕು. ಅಲ್ಲದೇ, ಅವರ ಸಕ್ರಿಯ ಕಾರ್ಯಚಟುವಟಿಕೆಗಳ ಜಾಲವನ್ನು ಬೇರು ಸಮೇತ ಕಿತ್ತೊಗೆಯಬೇಕು ಎಂದರು.

# ಹುಬ್ಬಳ್ಳಿ ಸ್ಫೋಟ: ಎಫ್‍ಎಸ್‍ಎಲ್ ವರದಿ ಬಳಿಕ ಮಾಹಿತಿ
ಹುಬ್ಬಳ್ಳಿ ರೈಲ್ವೆ ನಿಲ್ದಾಣ ದಳದ ನಡೆದ ಸ್ಫೋಟ ತನಿಖೆ ತೀವ್ರಗೊಂಡಿದ್ದು, ಸ್ಫೋಟಕದ ಮಾದರಿಯನ್ನು ಎಫ್‍ಎಸ್‍ಎಲ್ ಗೆ ಕಳಿಸಲಾಗಿದೆ. ಅದರ ವರದಿ ಬಂದ ಬಳಿಕ ನಿಖರ ಮಾಹಿತಿ ತಿಳಿಯಲಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶದಲ್ಲಿ ಇಂತಹ ಸ್ಫೋಟಕ ವಸ್ತು ಬಳಕೆ ಹೆಚ್ಚು. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ಪೊಲೀಸರ ಸಹಯೋಗದ ತನಿಖೆ ನಡೆಸಲು ಈ ಸ್ಪೋಟಕ ವಸ್ತುಗಳನ್ನು ಎಲ್ಲಿಂದ ತರಲಾಗಿದೆ, ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂಬುದರ ಬಗ್ಗೆ ತನಿಖೆ ನಡೆಯುತ್ತವೆ. ಈಗಲೇ ಪೂರ್ವಾಪರ ಹೇಳಿಕೆಯನ್ನು ನೀಡಲು ಸರಿಯಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಹಾಗೂ ಹುಬ್ಬಳ್ಳಿಯಲ್ಲಿ ಸ್ಲೀಪರ್ ಸೆಲ್ ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ರಾಷ್ಟ್ರೀಯ ತನಿಖಾ ದಳದ ಮಾಹಿತಿ ಮೇರೆಗೆ ಹುಬ್ಬಳ್ಳಿಯ ಒಬ್ಬನನ್ನು ಬಂಧಿಸಿದ್ದಾರೆ. ಈ ಕುರಿತು ತನಿಖೆ ಮುಂದುವರಿದಿದೆ ಎಂದರು.

Facebook Comments

Sri Raghav

Admin