ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು..? : ಸಿ.ಟಿ.ರವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.27- ಹಾನಗಲ್-ಸಿಂಧಗಿ ಉಪಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆ ರಾಜ ಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ, ಇದೇ ವೇಳೆ ಆರೋಪ, ಪ್ರತ್ಯಾರೋಪಗಳ ಜೊತೆಗೆ ಜಾತಿ ನಿಂದನೆಯು ಪ್ರಮುಖ ಅಸ್ತ್ರವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಕೂಡ ಹರಿಹಾಯ್ದಿದ್ದಾರೆ.

ಕಂಬಳಿ ಹಾಕುವ ಸಂಬಂಧ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಂಬಳಿ ಹಾಕಲು ಕುರುಬ ಜಾತಿಯವರೆ ಆಗಬೇಕು ಅನ್ನುವ ನಿಮ್ಮ ವಾದದ ಪ್ರಕಾರ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೆ? ಎಂದು ಪ್ರಶ್ನಿಸಿದ್ದಾರೆ.

Facebook Comments