‘ಥರ್ಡ್ ಅಂಪೈರ್’ ಫಲಿತಾಂಶದಲ್ಲಿ ಸಚಿವ ಸಿ.ಟಿ. ರವಿಗೆ ಕೊರೋನಾ ಪಾಸಿಟಿವ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.13- ಕನ್ನಡ ಮತ್ತು ಸಂಸ್ರ್ಕತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಕೋವಿಡ್ ಟೆಸ್ಟ್ ಮಾಡಿಸಿದ್ದು, ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.

ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಅವರು, ತಮಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಸೂಕ್ತ ಚಿಕಿತ್ಸೆ ಪಡೆದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ನಿನ್ನೆ ನಾನು, ಮಡದಿ ಪಲ್ಲವಿ, ನನ್ನ ಸಿಬ್ಬಂದಿ ವರ್ಗ ಕೋವಿಡ್ 19 ಪರೀಕ್ಷೆಗೆ ಒಳಪಟ್ಟಿದ್ದೆವು. ಪಲ್ಲವಿ ಹಾಗೂ ನನ್ನ ಗನ್-ಮ್ಯಾನ್, ಚಾಲಕ ಸೇರಿ ಆಫೀಸ್ ಸಿಬ್ಬಂದಿ ಎಲ್ಲರದ್ದು ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್‍ನ್ಲಲಿ ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢಪಟ್ಟಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ.

ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸಲಿದ್ದು, ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ ತಿಳಿಸಿದ್ದಾರೆ.

ಶನಿವಾರ ಸಿ.ಟಿ.ರವಿ, ಅವರ ಪತ್ನಿ ಪಲ್ಲವಿ, ಗನ್‍ಮ್ಯಾನ್ ಮತ್ತು ಕಾರಿನ ಚಾಲಕ ಸೇರಿ ಕಚೇರಿ ಸಿಬ್ಬಂದಿ ಕೊರೊನಾ ಪರೀಕ್ಷೆ ಮಾಡಿಸಿದ್ದರು. ನಿನ್ನೆ ಸಂಜೆ ವರದಿ ಬಂದಿದ್ದು, ಪತ್ನಿ ಪಲ್ಲವಿ, ಗನ್‍ಮ್ಯಾನ್ ಮತ್ತು ಕಾರಿನ ಚಾಲಕ ಸೇರಿ ಕಚೇರಿ ಸಿಬ್ಬಂದಿಗೆ ನೆಗೆಟಿವ್ ಬಂದಿದೆ. ಆದರೆ ಸಿ.ಟಿ.ರವಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

Facebook Comments

Sri Raghav

Admin